ಭಟ್ಕಳ ಡೈರಿ ವರದಿ
ಭಟ್ಕಳ: ನಗರದ ಆನಂದ ಆಶ್ರಮ ಕಾನ್ವೆಂಟ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದ ಬಾಲಕರ ಹಾಗೂ ಬಾಲಕಿಯರ ಖೋಖೋ ಸ್ಪರ್ಧೆಯಲ್ಲಿ ಹೊನ್ನೆಮಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿವೆ.
ಹೊನ್ನೆಮಡಿ ಶಾಲೆಯ ಬಾಲಕರ ತಂಡ ಸತತ ನಾಲ್ಕನೇ ವರ್ಷ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷವಾಗಿದೆ. ಇದೇ ವೇಳೆ ಬಾಲಕಿಯರ ತಂಡವೂ ಸತತ ಮೂರನೇ ವರ್ಷ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದೆ.
ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ತಾಲೂಕು ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ ಎರಡೂ ತಂಡಗಳಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದರು. ಮುಖ್ಯಶಿಕ್ಷಕರು, ಸಹಶಿಕ್ಷಕರು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೂ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಹೊನ್ನೆಮಡಿ ಶಾಲೆಯ ತಂಡಗಳು ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಲಾಯಿತು.
ಇದನ್ನೂ ಓದಿ:
ಭಟ್ಕಳದ ನೆಲದ ಹೆಮ್ಮೆಯ ಅನಂತನಾಗ ಅವರ ಅಪೂರ್ವ ಕಲಾಯಾನ

