ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ (social media) ಬಾಂಬ್ ಸ್ಫೋಟದ ಕಾಮೆಂಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (arrested). ಬಂಧಿತ ಆರೋಪಿಯನ್ನು ಭಟ್ಕಳ (Bhatkal) ತಾಲೂಕಿನ ದೇವಿನಗರ ನಿವಾಸಿ ಶಂಕರ ಮಾಸ್ತಪ್ಪ ಮೊಗೇರ (೩೫) ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈತ ತನ್ನ ಇನ್ಸ್ಟಾಗ್ರಾಂ (instagram) ಖಾತೆಯಲ್ಲಿ “ಸಪೋರ್ಟ್ ಮಾಡಿ ಬ್ರೊ ಉಳ್ಳಾಲ್ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂದು ಪೋಸ್ಟ್ ಮಾಡಿದ್ದು, ವೈರಲ್ ಆಗಿತ್ತು. ಇದನ್ನು ಪೊಲೀಸ್ ಇಲಾಖೆಯ ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ದೊಡ್ಡಮನಿ ಗಮನಿಸಿ, ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ (arrested).
stranded/ ದುಬೈನಲ್ಲಿ ಸಿಲುಕಿದ ಭಟ್ಕಳಿಗರು: ಅಧಿಕೃತ ಪಟ್ಟಿಯಲ್ಲಿಲ್ಲ ಉತ್ತರ ಕನ್ನಡ
ಬೇರೊಬ್ಬರು ಹಂಚಿಕೊಂಡ ಪೋಸ್ಟ್ಗೆ `ಶಂಕರ್೧೧೯೧೬’ ಎಂಬ ಖಾತೆಯನ್ನು ಬಳಸಿ ಬಾಂಬ್ ಸ್ಫೋಟಿಸುವ ಕಮೆಂಟ್ ಮಾಡಲಾಗಿತ್ತು. ಮೊಹಮ್ಮದ್ ರಿಯಾಜ್ ಕಡಂಬು ಅವರು ಈ ಕುರಿತು ಮಾಹಿತಿ ಹಂಚಿಕೊಂಡು, “ಆರೋಪಿಯನ್ನು ಪೊಲೀಸರು ಕೂಡಲೇ ಬಂಧಿಸುತ್ತಾರೆ ಎಂದು ಭಾವಿಸುತ್ತೇನೆ. ಯಾವುದಕ್ಕೂ ಉಳ್ಳಾಲ ಮಸೀದಿ ಬಳಿ ಬಾಂಬ್ ಪತ್ತೆ ದಳವನ್ನು ಕಳುಹಿಸಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದರು.
Holi festival/ ಭಟ್ಕಳದಲ್ಲಿ ಸಂಭ್ರಮದ ಹೋಳಿ ಹಬ್ಬ
ಈ ಮಾಹಿತಿ ಹಂಚಿಕೊಂಡಿದ್ದಕ್ಕೆ ಧನ್ಯವಾದ ತಿಳಿಸಿದ್ದ ಮಂಗಳೂರು (Mangaluru) ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ ಎಂಬ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅಪರಾಧ. ಉಳ್ಳಾಲ ಠಾಣೆಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುತ್ತೇವೆ” ಎಂದು ಹೇಳಿದ್ದರು. ವಿಧಾನಸಭೆ ಸ್ಪೀಕರ್, ಸ್ಥಳೀಯ ಶಾಸಕ ಯು ಟಿ ಖಾದರ್ (U T Khader) ಕೂಡ ಈ ಬಗ್ಗೆ ಪ್ರತಿಕ್ರಿಯಿಸಿ, ಆರೋಪಿಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದರು.
degree exams/ ಪದವಿ ಪರೀಕ್ಷೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಉತ್ತಮ ಫಲಿತಾಂಶ
ಕಮಿಷನರ್ಗೆ ದೂರು: ಈ ನಡುವೆ ಕೋಮು ಸೌಹಾರ್ದವನ್ನು ಕೆಡಿಸಲು ಯತ್ನಿಸಿದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳೂರು ಪೊಲೀಸ್ ಕಮಿಷನರ್ಗೆ ದೂರು ಕೂಡ ನೀಡಲಾಗಿತ್ತು. ಉಳ್ಳಾಲ ಜುಮಾ ಮಸ್ಜಿದ್ ಮತ್ತು ಸಯ್ಯಿದ್ ಮದನಿ ದರ್ಗಾ ಸಮಿತಿ ಪ್ರಮುಖರು ಕಮಿಷನರ್ ಕಚೇರಿಗೆ ತೆರಳಿ ಸೋಮವಾರ ದೂರು ದಾಖಲಿಸಿದ್ದರು.



