ಭಟ್ಕಳ (Bhatkal): ಕಳೆದ ಎರಡು ದಿನಗಳಿಂದ ಪಟ್ಟಣದ ಮಾರಿಕಾಂಬಾ ದೇವಸ್ಥಾನದ (Marikamba Temple) ಗದ್ದುಗೆಯ ಏರಿದ ಸುಪ್ರಸಿದ್ದ ಮಾರಿ ಹಬ್ಬವು (Mari Habba) ಗುರುವಾರದಂದು ಸಂಜೆ ಸಾವಿರಾರು ಅಧಿಕ ಭಕ್ತಸಮೂಹದೊಂದಿಗೆ ದೇವಸ್ಥಾನದಿಂದ ಜಾಲಿಕೋಡಿ ಸಮುದ್ರ ತೀರದ (sea shore) ತನಕ ಮಾರಿ ಮೂರ್ತಿಯನ್ನು ಹೊತ್ತು ವಿಸರ್ಜಿಸುವ ಮೂಲಕ ಸುಸಂಪನ್ನಗೊಂಡಿತು (grand procession).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಬುಧವಾರದಂದು ಮಾರಿಕಾಂಬಾ ದೇವಸ್ಥಾನದ ಗದ್ದುಗೆಯಲ್ಲಿ ಪ್ರತಿಷ್ಠಾಪನೆಗೊಂಡ ಮಾರಿಯಮ್ಮನನ್ನು (Mariyamma) ಪೂಜಿಸಲಾಗಿತ್ತು. ಎರಡನೇ ದಿನವಾದ ಗುರುವಾರದಂದು ಮುಂಜಾನೆಯಿಂದಲೇ ಮಾರಿಯಮ್ಮನ ದರ್ಶನಕ್ಕೆ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕು, ಜಿಲ್ಲೆಯಿಂದ ಬಂದಂತಹ ಭಕ್ತರು ಕಿ ಮೀ. ಗಟ್ಟಲೆ ಸಾಲಿನಲ್ಲಿ ನಿಂತು ಹಣ್ಣು ಕಾಯಿ ಮಾಡಿಸಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ತಾಲೂಕಿನ ಜನರು ಮಾರಿ ದೇವಿಗೆ ಮನೆಯಲ್ಲಿಯೇ ಪ್ರಾರ್ಥಿಸಿ ಕೋಳಿ ಬಲಿ ಮಾಡಿ ಹಬ್ಬವನ್ನು ಆಚರಿಸಿದ್ದಾರೆ.
ಇದನ್ನೂ ಓದಿ: Murudeshwara Circle/ ‘ಭಟ್ಕಳ ಗ್ರಾಮಾಂತರ ವೃತ್ತ’ ಇನ್ನು ಮುಂದೆ ‘ಮುರುಡೇಶ್ವರ ವೃತ್ತ ‘!
ಬುಧವಾರ ಸಂಜೆ ದೇವಸ್ಥಾನಕ್ಕೆ ಮೀನುಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ (Minister Mankal Vaidya) ಹಾಗೂ ಪುತ್ರಿ ಬೀನಾ ವೈದ್ಯ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಗುರುವಾರ ಮಾಜಿ ಸಚಿವ ಶಿವಾನಂದ ನಾಯ್ಕ (Ex Minister Shivanand Naik) ಮತ್ತಿತರರು ದೇವರ ದರ್ಶನ ಪಡೆದು ಕೃತಾರ್ಥರಾದರು. ಗುರುವಾರ ಸಂಜೆ ೪.೩೦ ರ ಸುಮಾರಿಗೆ ಮಾಜಿ ಶಾಸಕ ಸುನೀಲ ನಾಯ್ಕ (Ex MLA Sunil Naik) ಹಾಗೂ ಆಡಳಿತ ಮಂಡಳಿ ಸದಸ್ಯರು, ಸ್ವಯಂ ಸೇವಕರು ಹಾಗೂ ಭಕ್ತರ ಸಮ್ಮುಖದಲ್ಲಿ ಮಾರಿಯಮ್ಮನಿಗೆ ವಿಸರ್ಜನಾ ಪೂಜೆ ನೆರವೆರಿಸಲಾಯಿತು.
ವಿಡಿಯೋ ಸಹಿತ ಇದನ್ನೂ ಓದಿ: Goddess Mariyamma/ ಮಾರಿಯಮ್ಮನ ದರ್ಶನಕ್ಕೆ ಜನಸಾಗರ
ಧಾರಾಕಾರ ಮಳೆಯ ನಡುವೆಯೂ ಭಕ್ತರು ದೇವಿಯ ಮೂರ್ತಿಯನ್ನು ಹೊತ್ತು ಜಯಘೋಷಗಳೊಂದಿಗೆ ದೇವಸ್ಥಾನದಿಂದ ಹೊರ ತಂದ ಭಕ್ತರು ತಲೆ ಮೇಲೆ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಪೇಟೆ ಮುಖ್ಯ ರಸ್ತೆ ಮಾರ್ಗವಾಗಿ ಬಂದರ ರಸ್ತೆಯಿಂದ ಹನುಮಾನ ನಗರ, ಕರಿಕಲ್ ಮಾರ್ಗದಲ್ಲಿ ಸಾಗಿ ಬಂದು ಜಾಲಿ ಕೋಡಿ ಸಮುದ್ರ ತೀರದಲ್ಲಿ ವಿಸರ್ಜನೆ ಮಾಡಲಾಯಿತು (grand procession). ಇನ್ನು ದಾರಿ ಮಧ್ಯೆ ಇಲ್ಲಿನ ಹನುಮಾನ ನಗರ ದಿಂದ ಸಮುದ್ರ ತೀರದ ತನಕ ಮನೆಯ ಮಂದಿ ಮಾರಿದೇವಿ ಮೆರವಣಿಗೆ ಸಾಗಿ ಬಂದಾಗ ಊರಿನ ಜನರು ರಸ್ತೆಯ ಪಕ್ಕದಲ್ಲಿ ಕೋಳಿ ಬಲಿ ನೀಡಿ ರೋಗ ರುಜನಿಗಲ ನಿರ್ಮೂಲನೆ ಮಾಡುವಂತೆ ಬೇಡಿಕೊಂಡು ದೇವಿಯ ಹೂವಿನ ಪ್ರಸಾದ ಸ್ವೀಕರಿಸಿದರು.
ವಿಡಿಯೋ ಸಹಿತ ಇದನ್ನೂ ಓದಿ: mari Jathre begins/ ಗದ್ದುಗೆ ಏರಿದ ಮಾರಿಯಮ್ಮ
ಸಂಜೆ ವೇಳೆ 6 ಗಂಟೆಯ ವೇಳೆಗೆ ಸಮುದ್ರ ತೀರ ತಲುಪಿದ ಮಾರಿ ದೇವಿ ಮೂರ್ತಿಯನ್ನು ಸ್ವಯಂ ಸೇವಕರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಮಾರಿಯ ಮೂರ್ತಿಯನ್ನು ಮೆರವಣಿಗೆಯ ಮೂಲಕ ಜಾಲಿಕೋಡಿ ಸಮುದ್ರ ತೀರಕ್ಕೆ ಕೊಂಡೊಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಲಾಯಿತು. ಸಕಲ ವಿಧಿವಿಧಾನಗಳ ಮೂಲಕವಿಸರ್ಜಿಸುವದರೊಂದಿಗೆ ಮಾರಿ ಜಾತ್ರೆ ಸಂಪನ್ನಗೊಂಡಿತ್ತು.
ಇದನ್ನೂ ಓದಿ: Best associate professor award/ ಡಾ ಭಾಗೀರಥಿ ನಾಯ್ಕ ಗೆ ಅತ್ಯುತ್ತಮ ಅಸೋಸಿಯೇಟ್ ಪ್ರೊಫೆಸರ್ ಪ್ರಶಸ್ತಿ
ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಪರಮೇಶ್ವರ ನಾಯ್ಕ, ಶ್ರೀಪಾದ ಕಂಚುಗಾರ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಹೆಚ್ಚುವರಿ ಎಸ್‌ಪಿ ಜಿ ಕೃಷ್ಣಮೂರ್ತಿ, ಡಿವೈಎಸ್‌ಪಿ ಮಹೇಶ್, ನಗರ ಠಾಣೆ ಸಿಪಿಐ ದಿವಾಕರ, ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಅಗ್ನಿಶಾಮಕ ದಳ, ಕರಾವಳಿ ಪಡೆ, ಶ್ವಾನದಳ ಹಾಗೂ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು.
ಮಾರಿಯಮ್ಮ ವಿಸರ್ಜನೆಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ: devotional music/ ಚಿತ್ರಾಪುರ ಶ್ರೀಮಠದಲ್ಲಿ ಉಮೇಶ ಮುಂಡಳ್ಳಿ ಭಕ್ತಿ ಸಂಗೀತ



