ಭಟ್ಕಳ ಡೈರಿ ವರದಿ

ಭಟ್ಕಳ: ಅಪ್ರಾಪ್ತರಿಗೆ ವಾಹನ ನೀಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಟ್ಕಳ ತಾಲೂಕಿನ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು ೪೫ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ಒಟ್ಟು ₹೫,೩೮,೫೦೦ ದಂಡ ವಿಧಿಸಿದೆ.

ಅಪ್ರಾಪ್ತರು ವಾಹನ ಚಲಾಯಿಸುವುದರಿಂದ ಅಪಘಾತದ ಅಪಾಯ ಹೆಚ್ಚುವುದರ ಜತೆಗೆ ಅವರ ಜೀವಕ್ಕೂ, ರಸ್ತೆಯಲ್ಲಿ ಸಂಚರಿಸುವ ಇತರರ ಸುರಕ್ಷತೆಗೂ ಅಪಾಯ ಉಂಟಾಗಬಹುದು. ಈ ಹಿನ್ನೆಲೆಯಲ್ಲಿ ಅಪ್ರಾಪ್ತರಿಗೆ ವಾಹನ ನೀಡುವವರ ವಿರುದ್ಧವೇ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಾಹನ ಚಲಾಯಿಸಲು ಅಪ್ರಾಪ್ತರಿಗೆ ವಾಹನ ನೀಡಿದರೆ ಪ್ರಕರಣ ದಾಖಲಾಗುವುದರ ಜತೆಗೆ ನ್ಯಾಯಾಲಯದ ವಿಚಾರಣೆಯನ್ನೂ ಎದುರಿಸಬೇಕಾಗುತ್ತದೆ. ತಪ್ಪಿತಸ್ಥರಿಗೆ ನ್ಯಾಯಾಲಯದ ಮೂಲಕ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಅಪ್ರಾಪ್ತರ ವಾಹನ ಚಾಲನೆ ವಿರುದ್ಧ ತಪಾಸಣೆ ಮುಂದುವರಿಯಲಿದ್ದು, ಪೋಷಕರು ಹಾಗೂ ವಾಹನ ಮಾಲೀಕರು ಮಕ್ಕಳಿಗೆ ವಾಹನ ನೀಡದೆ ರಸ್ತೆ ಸುರಕ್ಷತೆಯ ಜವಾಬ್ದಾರಿ ವಹಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ :

ದೇವಿಮನೆ ಘಟ್ಟದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಂದಕಕ್ಕೆ: ಭಟ್ಕಳದ ಮಹಿಳೆ ಸಾವು, ೧೯ ಮಂದಿಗೆ ಗಾಯ

ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ