ಭಟ್ಕಳ ಡೈರಿ ವರದಿ

ಭಟ್ಕಳ: ನಗರದ ಮೂಸಾನಗರದ ೪ನೇ ಕ್ರಾಸ್‌ನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಟ್ಟಿ ಹಾಕಿರುವ ಮಾಹಿತಿ ಮೇರೆಗೆ ಭಟ್ಕಳ ನಗರ ಠಾಣೆ ಪೊಲೀಸರು ದಾಳಿ ನಡೆಸಿ, ಸುಮಾರು ₹೭೦ ಸಾವಿರ ಮೌಲ್ಯದ ಮೂರು ಹೋರಿಗಳನ್ನು ರಕ್ಷಿಸಿದ್ದಾರೆ.

ಮೂಸಾನಗರದ ೪ನೇ ಕ್ರಾಸ್‌ನ ಹವ್ವಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಹವ್ವಾ ಮೊಹಮ್ಮದ್ ಹುಸೇನ್ ಹವ್ವಾ ಎಂಬವರು ಮನೆಯ ಪಕ್ಕದ ಶೆಡ್‌ನಲ್ಲಿ ಜಾನುವಾರುಗಳನ್ನು ಸಮರ್ಪಕ ಆಹಾರ ಮತ್ತು ನೀರು ನೀಡದೆ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಶೆಡ್‌ನಲ್ಲಿ ಮೂರು ಹೋರಿಗಳು ಪತ್ತೆಯಾಗಿದ್ದು, ಅವುಗಳನ್ನು ರಕ್ಷಿಸಲಾಗಿದೆ. ಇದೇ ವೇಳೆ ಮಾಂಸ ಕತ್ತರಿಸಲು ಬಳಸುವ ಉಪಕರಣಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ದಾಖಲೆಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ೨೦೨೦ ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ೧೯೬೦ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಭಟ್ಕಳ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ದೇವಿನಗರ ಹಿಂದೂ ರುದ್ರಭೂಮಿಗೆ ಸ್ವಚ್ಛತೆಯ ಸ್ಪರ್ಶ; ದಯಾ ನಾಯ್ಕ ಮುತುವರ್ಜಿ

ಮುರುಡೇಶ್ವರದಲ್ಲಿ ರಾತ್ರಿ ಪೊಲೀಸ್ ಗಸ್ತು ಹೆಚ್ಚಳ: ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ