ಭಟ್ಕಳ ಡೈರಿ ವರದಿ

ಭಟ್ಕಳ: ಸಾರ್ವಜನಿಕ ಸ್ಥಳಗಳಲ್ಲಿ ಓಸಿ-ಮಟಕಾ ಜುಗಾರಾಟ ನಡೆಸುತ್ತಿದ್ದ ಆರೋಪದ ಮೇರೆಗೆ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐವರ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಹಡೀಲ್-ಸಬ್ಬತ್ತಿ ನಿವಾಸಿ, ಕೂಲಿ ಕಾರ್ಮಿಕ ಪುಂಡಲೀಕ ಈರಪ್ಪ ನಾಯ್ಕ (೪೨) ವಿರುದ್ಧ ಪ್ರಕರಣ ದಾಖಲಾಗಿದೆ. ಸಾರ್ವಜನಿಕರಿಂದ ಹಣ ಪಡೆದು ಅಂಕೆ-ಸಂಖ್ಯೆಗಳ ಮೇಲೆ ಪಂಥ ಕಟ್ಟಿಸಿ ಓಸಿ ಜುಗಾರಾಟ ನಡೆಸುತ್ತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆತನ ಬಳಿಯಿಂದ ಓಸಿ ಚೀಟಿ, ಬಾಲ್ ಪೆನ್ ಹಾಗೂ ₹೨೧೦ ನಗದು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ ೭೮(೩)ರಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನು, ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ತಲಾಂದ ನಿವಾಸಿ, ಬೀಡಾ ವ್ಯಾಪಾರಿ ನಾಗರಾಜ ನಾರಾಯಣ ನಾಯ್ಕ (೩೪) ಸಾರ್ವಜನಿಕರಿಂದ ಹಣ ಪಡೆದು ಓಸಿ-ಮಟಕಾ ಜುಗಾರಾಟ ನಡೆಸುತ್ತಿದ್ದ ಆರೋಪದ ಮೇರೆಗೆ ಸಿಕ್ಕಿಬಿದ್ದಿದ್ದು, ಆತನಿಂದ ₹೫೧೦ ನಗದು ಹಾಗೂ ಜುಗಾರಾಟಕ್ಕೆ ಬಳಸುತ್ತಿದ್ದ ಸಲಕರಣೆಗಳನ್ನು ವಶಕ್ಕೆ ಪಡೆಯಲಾಗಿದೆ.

ಮೂಡ ಶಿರಾಲಿ ನಿವಾಸಿ, ಪಾನಶಾಪ್‌ ಉದ್ಯೋಗಿ ಉದಯ ನಾಗಪ್ಪ ನಾಯ್ಕ (೩೨) ವಿರುದ್ಧವೂ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಓಸಿ-ಮಟಕಾ ಜುಗಾರಾಟ ನಡೆಸುತ್ತಿದ್ದ ವೇಳೆ ಆತನಿಂದ ₹೫೨೦ ನಗದು ಹಾಗೂ ಜುಗಾರಾಟದ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಲಿ ತಗ್ಗರಗೋಡ ನಿವಾಸಿ, ಪಾನಶಾಪ್‌ ಉದ್ಯೋಗಿ ಮಂಜುನಾಥ ನಾರಾಯಣ ನಾಯ್ಕ (೪೦) ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನಿಂದ ₹೪೮೦ ನಗದು ಹಾಗೂ ಓಸಿ-ಮಟಕಾ ಜುಗಾರಾಟದ ಸಲಕರಣೆಗಳನ್ನು ವಶಕ್ಕೆ ಪಡೆಯಲಾಗಿದೆ.

ಮಾವಿನಕುರ್ವೆ ಬೆಳ್ನೆ ನಿವಾಸಿ, ಬೀಡಾ ವ್ಯಾಪಾರಿ ಪ್ರಮೋದ ಗೋಯ್ದ ನಾಯ್ಕ (೩೪) ವಿರುದ್ಧವೂ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ರಸ್ತೆಯ ಬದಿಯಲ್ಲಿ ಓಸಿ-ಮಟಕಾ ಜುಗಾರಾಟ ನಡೆಸುತ್ತಿದ್ದ ವೇಳೆ ಆತನಿಂದ ₹೫೦೦ ನಗದು ಹಾಗೂ ಜುಗಾರಾಟದ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟಾರೆ ಐದು ಪ್ರಕರಣಗಳಲ್ಲಿ ₹೨,೨೨೦ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಜುಗಾರಾಟಕ್ಕೆ ಬಳಸಲಾಗಿದೆ ಎನ್ನಲಾದ ಚೀಟಿಗಳು ಹಾಗೂ ಇತರ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ : 

ಭಟ್ಕಳದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟ ಆರೋಪ: ₹೭೫ ಲಕ್ಷ ಅಡಮಾನ ಸಾಲ ಪಡೆದಿರುವ ಬಗ್ಗೆ ದೂರು

ಅಪರಾಧ ತಡೆಗೆ ಕ್ರಿಯೇಟಿವ್ ಫ್ರೆಂಡ್ಸ್ ಸಮಾಜಮುಖಿ ಹೆಜ್ಜೆ

ಭಟ್ಕಳದಲ್ಲಿ ಜಲ ಸಂವರ್ಧನೆಗೆ ಶ್ರಮದಾನ: ಮುಂಚಿತವಾಗಿಯೇ ನದಿ ಕಟ್ಟು ನಿರ್ಮಾಣ

ಸಂಪಾದಕೀಯ: ಶಾಂತಿ ಕಾಪಾಡುವುದು ಎಲ್ಲರ ಜವಾಬ್ದಾರಿ