ಭಟ್ಕಳ ಡೈರಿ ವರದಿ
ಭಟ್ಕಳ: ತಾಲೂಕಿನ ಸರ್ಪನಕಟ್ಟಾ–ಕೋಣಾರ ರಸ್ತೆಯ ಮಾಡರ್ನ್ ಪೇಂಟಿಂಗ್ ಅಂಗಡಿ ಎದುರು ಸಾರ್ವಜನಿಕ ಸ್ಥಳದಲ್ಲಿ ಓಸಿ ಜುಗಾರಾಟ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಠ್ಠಳ್ಳಿಯ ತಲಾಂದ ನಿವಾಸಿ ಗಣಪತಿ ದೇವೇಂದ್ರ ನಾಯ್ಕ (೩೧) ಪ್ರಕರಣದ ಆರೋಪಿಯಾಗಿದ್ದಾರೆ. ಇವರು ಅಂಗಡಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದಿನಾಂಕ ೧೬-೧೦-೨೦೨೬ರಂದು ರಾತ್ರಿ ೭.೩೦ರ ಸುಮಾರಿಗೆ ಆರೋಪಿಯು ಸಾರ್ವಜನಿಕರಿಂದ ಹಣ ಪಡೆದು, ಒಂದು ರೂಪಾಯಿಗೆ ೮೦ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿ ಅಂಕೆ-ಸಂಖ್ಯೆಗಳ ಮೇಲೆ ಹಣ ಪಣಕ್ಕಿಟ್ಟು ಓಸಿ ಜುಗಾರಾಟ ನಡೆಸುತ್ತಿದ್ದರೆಂದು ಆರೋಪಿಸಲಾಗಿದೆ.
ಈ ಸಂದರ್ಭದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ ೭೮(೩)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿನ ಸಾರಾಂಶ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ದೂರು ನೀಡಿದ್ದಾರೆ.
ಇದನ್ನೂ ಓದಿ :
ಭಟ್ಕಳ: ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ
ಭಟ್ಕಳ ಮಾರಿಯಮ್ಮನ ವಿಸರ್ಜನಾ ಸ್ಥಳ, ಮಾರ್ಗದ ನೋಂದಣಿಗೆ ದೇವಸ್ಥಾನ ಟ್ರಸ್ಟ್ ಮನವಿ




