ಭಟ್ಕಳ: ಮನೆ ಕಳ್ಳತನ ಪ್ರಕರಣ ದಾಖಲಾದ ಕೇವಲ 8 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ (Bhatkal) ಶಹರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ (swift action). ಬಂಧಿತರನ್ನು ಮಹಮದ್ ರಾಹಿಲ್ (೩೯) ಹಾಗೂ ನೌಶಾದ್ ಮುಕ್ತಾರ್ ಅಹಮದ್ ಹಂಚಿ (೨೮) ಎಂದು ಗುರುತಿಸಲಾಗಿದೆ. ಇಬ್ಬರೂ ಪುರವರ್ಗದ ಗಣೇಶನಗರ ನಿವಾಸಿಗಳಾಗಿದ್ದು, ಚಾಲಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮೇ ೨೦ರಂದು ಬಿಬಿ ಇನ್ಸಿಯಾ ಮಹಮ್ಮದ್ ರೆಹಾನ್ ಸಾಬ್ ಅವರು ಭಟ್ಕಳ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪುರವರ್ಗದಲ್ಲಿರುವ ತಮ್ಮ ಮನೆಯೊಳಗೆ ನುಗ್ಗಿದ ಕಳ್ಳರು ಬೆಡ್‌ರೂಮ್ ಬೀಗ ಒಡೆದು ಕಪಾಟಿನಲ್ಲಿದ್ದ ಬಂಗಾರದ ಆಭರಣ ಹಾಗೂ ನಗದು ಹಣ ಕಳವು ಮಾಡಿಕೊಂಡು ಹೋಗಿರುವುದಾಗಿ ತಿಳಿಸಿದ್ದಾರೆ.
College student/ ಕಾಲೇಜು ವಿದ್ಯಾರ್ಥಿ ಟೆಲಿಗ್ರಾಂ ಮೂಲಕ ಇತರರ ಮಾಹಿತಿ ಹಂಚಿದ್ದು ಯಾಕೆ?
ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ, ತನಿಖೆ ವೇಳೆ ಆರೋಪಿಗಳನ್ನು ಪುರವರ್ಗ ಸಮೀಪ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ (swift action). ವಿಚಾರಣೆ ನಡೆಸಿದಾಗ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತರಿಂದ ಸುಮಾರು ₹೨.೨೧ ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ₹೨೨,೯೫೦ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
arrested/ ಭಟ್ಕಳದಲ್ಲಿ ಪ್ರಮುಖ ಆರೋಪಿ ಬಂಧನ
ಉತ್ತರ ಕನ್ನಡ (Uttara Kannada) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ ಕೃಷ್ಣಮೂರ್ತಿ ಹಾಗೂ ಜಗದೀಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಿ ಗಿರೀಶ್ ನೇತೃತ್ವದಲ್ಲಿ ಸಿಪಿಐ ದಿವಾಕರ ಪಿ ಎಂ, ಪಿಎಸ್‌ಐ ನವೀನ್ ಎಸ್ ನಾಯ್ಕ ಹಾಗೂ ಸಿಬ್ಬಂದಿ ದಿನೇಶ್ ನಾಯಕ, ಸತೀಶ ಭಟ್ಟ, ರವಿ ಪಟಗಾರ, ಜಗದೀಶ ನಾಯ್ಕ, ಕಿರಣ ಪಾಟೀಲ, ಮಲ್ಲಿಕಾರ್ಜುನ ಉಟಗಿ ಮತ್ತು ವಿದ್ಯಾ ಆಚಾರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Bakrid festival/ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸಲು ಕರೆ



