ಭಟ್ಕಳ ಡೈರಿ ವರದಿ
ಭಟ್ಕಳ: ಚೆಸ್ ಕ್ರೀಡೆಯಲ್ಲಿ ಭಟ್ಕಳದ ಪ್ರತಿಭಾವಂತ ವಿದ್ಯಾರ್ಥಿನಿಯರಾದ ಪೂಜಾ ಖಾರ್ವಿ ಹಾಗೂ ಧೃತಿ ನಾಯ್ಕ ಗಮನಾರ್ಹ ಸಾಧನೆ ಮಾಡಿದ್ದು, ಕರ್ನಾಟಕ ವಿಶ್ವವಿದ್ಯಾಲಯದ ಯುನಿವರ್ಸಿಟಿ ಬ್ಲೂ ತಂಡಕ್ಕೆ ಆಯ್ಕೆಯಾಗುವ ಮೂಲಕ ಭಟ್ಕಳ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜಿನ ಈ ಇಬ್ಬರು ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿ ಯುನಿವರ್ಸಿಟಿ ಬ್ಲೂ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದರೊಂದಿಗೆ ಹೈದರಾಬಾದ್ನ ವೊಕ್ಸನ್ ವಿಶ್ವವಿದ್ಯಾಲಯದಲ್ಲಿ ನಡೆದ ಅಂತರ ವಿಶ್ವವಿದ್ಯಾಲಯ ದಕ್ಷಿಣ ಭಾರತ ವಲಯದ ಚೆಸ್ ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ ಅವಕಾಶವನ್ನೂ ಪಡೆದುಕೊಂಡಿದ್ದಾರೆ.
ಭಟ್ಕಳದ ವಿದ್ಯಾರ್ಥಿನಿಯರ ಈ ಸಾಧನೆ ಕಾಲೇಜಿನ ಕ್ರೀಡಾ ಕ್ಷೇತ್ರದ ಹೆಗ್ಗಳಿಕೆಗೆ ಮತ್ತೊಂದು ಗರಿ ಮೂಡಿಸಿದೆ. ವಿದ್ಯಾರ್ಥಿನಿಯರ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಣ ವಿಭಾಗದವರು, ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಚೆಸ್ ಪಂದ್ಯಾವಳಿಯಲ್ಲಿ ಭಟ್ಕಳದ ಗುರು ಸುಧೀಂದ್ರ ಕಾಲೇಜಿಗೆ ದ್ವಿತೀಯ ಸ್ಥಾನ




