ಭಟ್ಕಳ ಡೈರಿ ವರದಿ
ಭಟ್ಕಳ: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಟ್ಕಳದ ಅಂಜುಮನ್ ತಂತ್ರಜ್ಞಾನ ಮತ್ತು ನಿರ್ವಹಣಾ ಸಂಸ್ಥೆಯ (ಎಐಟಿಎಂ) ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿ ಪ್ರವೀಣ ರವಿ ಹರಿಜನ ಕಂಚಿನ ಪದಕ ಗೆದ್ದಿದ್ದಾರೆ. ಕರ್ನಾಟಕ ಸರ್ಕಾರದ ವತಿಯಿಂದ ೨೦೨೬ರ ಅಕ್ಟೋಬರ್ ೧೪ರಂದು ಮೈಸೂರಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಅವರು ಸಾಧನೆ ಮಾಡಿದ್ದಾರೆ.
ಪ್ರವೀಣ ಅವರ ಈ ಸಾಧನೆಯು ಭಟ್ಕಳದ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಪರಿಶ್ರಮ, ಸಮರ್ಪಣೆ ಮತ್ತು ಕ್ರೀಡಾಸಕ್ತಿಗೆ ಮತ್ತೊಂದು ಗೌರವ ದೊರೆತಂತಾಗಿದೆ. ಪ್ರವೀಣ ಅವರ ಸಾಧನೆಗೆ ಅಂಜುಮನ್ ತಂತ್ರಜ್ಞಾನ ಮತ್ತು ನಿರ್ವಹಣಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಎಂಬಿಎ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಅವರು ಹೆಚ್ಚಿನ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ :
ಭಟ್ಕಳದ ಎಐಟಿಎಂ ವಿದ್ಯಾರ್ಥಿ ಪ್ರವೀಣ ರವಿ ಹರಿಜನಗೆ ಕರಾಟೆಯಲ್ಲಿ ಚಿನ್ನದ ಪದಕ
ವಿಟಿಯು ರ್ಯಾಂಕ್ನೊಂದಿಗೆ ಮತ್ತೊಮ್ಮೆ ಮಿಂಚಿದ ಎಐಟಿಎಂ; ಮೊಹಮದ್ ಫಹಾದ್ಗೆ 6ನೇ ರ್ಯಾಂಕ್




