ಭಟ್ಕಳ ಡೈರಿ ವರದಿ
ಭಟ್ಕಳ: ಕರ್ನಾಟಕ ರಾಜ್ಯ ಕಂದಾಯ ನೌಕರರ ಸಂಘದ ಭಟ್ಕಳ ಶಾಖೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸುನೀಲ ಜೆ. ಕೋಚರಿಕರ ಆಯ್ಕೆಯಾಗಿದ್ದಾರೆ. ಬುಧವಾರ ಭಟ್ಕಳ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷೆಯಾಗಿ ರಜನಿ ದೇವಡಿಗ, ಖಜಾಂಚಿಯಾಗಿ ವೀಣಾ ನಾಯ್ಕ, ಉಪಾಧ್ಯಕ್ಷರಾಗಿ ಧೀರಜ ಕುಡಾಳಕರ್, ಮಹಿಳಾ ಉಪಾಧ್ಯಕ್ಷೆಯಾಗಿ ದೀಪಾ ನಾಯ್ಕ, ಸಂಘಟನಾ ಕಾರ್ಯದರ್ಶಿಯಾಗಿ ಶಶಿಧರ ಬಿ. ಹೊನ್ನಳ್ಳಿ, ರಾಜ್ಯ ಪರಿಷತ್ ಸದಸ್ಯೆಯಾಗಿ ಲತಾ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾಗಿ ಸಿದ್ದರಾಜು ಬಿ. ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಂದನಾ ನಾಯ್ಕ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆಯಲ್ಲಿ ಕಚೇರಿ ಶಿರಸ್ತೇದಾರರಾದ ರಜನಿ ದೇವಾಡಿಗ ಮತ್ತು ರಾಧಿಕಾ ಶಾಸ್ತ್ರಿ, ಕಂದಾಯ ನಿರೀಕ್ಷಕ ವಿಶ್ವನಾಥ ಗಾಂವ್ಕರ್, ಮಾವಳ್ಳಿ ಕಂದಾಯ ನಿರೀಕ್ಷಕ ಶ್ರೀನಿವಾಸ ಮಾಸ್ತಿ, ಉತ್ತರ ಕನ್ನಡ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾ ಸಂಘದ ಅಧ್ಯಕ್ಷ ಚಾಂದಬಾಷಾ ಮುಲ್ಲಾ ಉಪಸ್ಥಿತರಿದ್ದರು. ಇವರೊಂದಿಗೆ ಭಟ್ಕಳ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿಯ ಸಿಬ್ಬಂದಿ ಮತ್ತು ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಸರ್ಕಾರಿ ಶಾಲಾ ಮಕ್ಕಳ ಜ್ಞಾನಪ್ರತಿಭೆಗೆ ವೇದಿಕೆ: ಮಣ್ಕುಳಿಯಲ್ಲಿ ರಸಪ್ರಶ್ನೆ ಸ್ಪರ್ಧೆ
ಮೂರು ದಿನ ಕಬಡ್ಡಿ ರಂಗೇರಲಿದೆ ಭಟ್ಕಳ; ಅರ್ಜುನ ಪ್ರಶಸ್ತಿ ಪುರಸ್ಕೃತ ಬಿ.ಸಿ. ರಮೇಶ ಆಗಮನ



