ಭಟ್ಕಳ ಡೈರಿ ವರದಿ
ಭಟ್ಕಳ: ತಾಲೂಕಿನ ಸರ್ಪನಕಟ್ಟೆ ಸಮೀಪದ ಹುಯ್ಲಮಡಿ ರಸ್ತೆಯಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ರಿಂದ ಎರಡು ವರ್ಷ ಪ್ರಾಯದ ಚಿರತೆಯೊಂದು ಮೃತಪಟ್ಟಿರುವ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.
ಸರ್ಪನಕಟ್ಟೆಯ ನೀರು ಫ್ಯಾಕ್ಟರಿ ಸಮೀಪ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಯಾವುದೋ ವಾಹನ ಚಿರತೆಗೆ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ. ಡಿಕ್ಕಿಯ ತೀವ್ರತೆಗೆ ಚಿರತೆ ಮೃತಪಟ್ಟಿದೆ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವಿಗೆ ನಿಖರ ಕಾರಣ ಸೇರಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಕಂಡೆಕೊಡ್ಲಿನಲ್ಲಿ ಚಿರತೆ ಅಟ್ಟಹಾಸ: ಕರು ಬಲಿ, ಮತ್ತೊಂದು ದನದ ಮೇಲೆ ದಾಳಿ; ಗ್ರಾಮಸ್ಥರಲ್ಲಿ ಆತಂಕ
ಕಾಡಿನಂಚಿನ ಗ್ರಾಮಗಳಲ್ಲಿ ಚಿರತೆ ಭೀತಿ: ಜಾನುವಾರುಗಳ ಮೇಲಿನ ದಾಳಿ, ಜನರ ಆತಂಕಕ್ಕೆ ಯಾರು ಹೊಣೆ?
ಭಟ್ಕಳದಲ್ಲಿ ಚಿರತೆ ದಾಳಿ ಆತಂಕದ ನಡುವೆಯೇ ಖಾಲಿ ಬೋನು! ಅರಣ್ಯ ಇಲಾಖೆಯ ಕ್ರಮಕ್ಕೆ ಕಂಡೆಕೋಡ್ಲು ಗ್ರಾಮಸ್ಥರ ಆಕ್ರೋಶ



