ಭಟ್ಕಳ ಡೈರಿ ವರದಿ
ಶಿರಾಲಿ: ಭಗವದ್ಗೀತೆಯ ತತ್ವ, ಸಂದೇಶ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಜನಸಾಮಾನ್ಯರಲ್ಲಿ ಹರಡುವ ಉದ್ದೇಶದಿಂದ ಭಗವದ್ಗೀತಾ ಅಭಿಯಾನ–ಡಿಸೆಂಬರ್–೨೦೨೬ರ ಅಂಗವಾಗಿ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಉದ್ಘಾಟನಾ ಸಮಾರಂಭ ನವೆಂಬರ್ ೨೪ರಂದು ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಆಶ್ರಯದಲ್ಲಿ ಹಾಗೂ ಶಿರಸಿಯ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ (ರಿ) ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮ ಅಂದು ಶಿರಾಲಿಯ ಜನತಾ ವಿದ್ಯಾಲಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಹಾಗೂ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದು, ಭಗವದ್ಗೀತೆಯ ಮಹತ್ವ, ಅದರ ಸಂದೇಶ ಹಾಗೂ ಜೀವನದಲ್ಲಿ ಗೀತೆಯ ಪ್ರಸ್ತುತತೆ ಕುರಿತು ಕಾರ್ಯಕ್ರಮ ನಡೆಯಲಿದೆ. ಭಗವದ್ಗೀತಾ ಅಭಿಯಾನದ ಅಂಗವಾಗಿ ನಡೆಯುವ ಈ ಸಮಾರಂಭದಲ್ಲಿ ಸಾರ್ವಜನಿಕರು, ಭಕ್ತರು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಆಹ್ವಾನಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ



