ಭಟ್ಕಳ ಡೈರಿ ವರದಿ
ಭಟ್ಕಳ: ಇಲ್ಲಿನ ವಿದ್ಯಾರ್ಥಿನಿ ಸಿಂಚನಾ ಆರ್. ನಾಯ್ಕ ಜಿಲ್ಲಾಮಟ್ಟದ ಯುವ ಸಂಸತ್ (Youth Parliament) ಕಾರ್ಯಕ್ರಮದಲ್ಲಿ ಗಮನಾರ್ಹವಾಗಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜು ಹಾಗೂ ಭಟ್ಕಳಕ್ಕೆ ಹೆಮ್ಮೆ ತಂದಿದ್ದಾರೆ. ಭಟ್ಕಳ ಎಜುಕೇಶನ್ ಟ್ರಸ್ಟ್ನ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಸಿಂಚನಾ, ನವೆಂಬರ್ ೧೯ರಂದು ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ಯುವ ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಅವರ ಉತ್ತಮ ಭಾಗವಹಿಸುವಿಕೆ ಮತ್ತು ಪ್ರದರ್ಶನವನ್ನು ಮೆಚ್ಚಿ ಪ್ರಶಂಸನಾ ಪ್ರಮಾಣಪತ್ರ ನೀಡಲಾಗಿದ್ದು, ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಅವರ ಸಾಧನೆಗೆ ಮತ್ತೊಂದು ಹೆಗ್ಗಳಿಕೆಯಾಗಿದೆ. ಸಿಂಚನಾ ಅವರ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಶ್ರೀ ಗುರು ವಿದ್ಯಾಧಿರಾಜ ಕಾಲೇಜಿಗೆ ಹೆಮ್ಮೆ ತಂದ ಸಿಂಚನಾ
ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು; ಗುರು ವಿದ್ಯಾಧಿರಾಜ ಕಾಲೇಜಿನಲ್ಲಿ ನೃತ್ಯಾಂಜಲಿ ಸಂಭ್ರಮ



