ಭಟ್ಕಳ: ನಗರದ ಪೊಲೀಸ್ ಮೈದಾನದಲ್ಲಿ ನಡೆದ ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ (ಟಿಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಮನವಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಹರಿಶೋಭಿತ ತಂಡ ರನ್ನರ್‌ಅಪ್ ಸ್ಥಾನ ಪಡೆದುಕೊಂಡಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಐಪಿಎಲ್ ಮಾದರಿಯಲ್ಲಿ ಆಯೋಜಿಸಿದ್ದ ಈ ಟಿಪಿಎಲ್ ಪಂದ್ಯಾವಳಿಯಲ್ಲಿ (premier league) ಹರಿಶೋಭಿತ, ಮನವಿ, ವಿದ್ಯಾಶ್ರೀ ಹಾಗೂ ಗುರುಜಿ ಎಂಬ ನಾಲ್ಕು ತಂಡಗಳು ಭಾಗವಹಿಸಿದ್ದವು. ಶಿಕ್ಷಕರಲ್ಲಿ ಕ್ರೀಡಾಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಪಂದ್ಯಾವಳಿಯನ್ನು ಭಟ್ಕಳ ಪ್ರಾಥಮಿಕ ಶಾಲಾ ಶಿಕ್ಷಕರ (primary teachers) ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಇದನ್ನು ಓದಿ: Indira canteen/ ಭಟ್ಕಳದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ
ಪಂದ್ಯಾವಳಿಯನ್ನು (premier league) ಉದ್ಘಾಟಿಸಿ ಮಾತನಾಡಿದ ಭಟ್ಕಳ (Bhatkal) ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ್, ಶಿಕ್ಷಕರು ದಿನನಿತ್ಯದ ಕೆಲಸದ ಒತ್ತಡವನ್ನು ಮರೆತು ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಅಭಿನಂದನಾರ್ಹ ಎಂದರು.
ಇದನ್ನು ಓದಿ: Road repair/ ಗುಡ್ಡೆಕಟ್ಟೆ ರಸ್ತೆ ಹೊಂಡಮುಚ್ಚಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟ ಯುವಕರು!
ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಪ್ರೌಢಶಾಲಾ ಶಿಕ್ಷಕ ಶ್ರೀಧರ ಶೇಟ, ಭಟ್ಕಳ ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ ಎನ್ ನಾಯ್ಕ, ಕಾರ್ಯದರ್ಶಿ ವೆಂಕಟೇಶ ನಾಯ್ಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ತಂಡಗಳಿಗೆ ಶುಭಾಶಯ ಕೋರಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಎಂ ಡಿ ರಫೀಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜನಾರ್ಧನ ಮೊಗೇರ ನಿರೂಪಿಸಿದರು.
ಇದನ್ನು ಓದಿ: Honesty/ ಚಿನ್ನಾಭರಣವಿದ್ದ ಬ್ಯಾಗ್ ಮರಳಿಸಿದ ಆಟೋ ಚಾಲಕ



