ಭಟ್ಕಳ: ಸಮುದ್ರಕ್ಕೆ ಕಪ್ಪೆ ಚಿಪ್ಪು ಹಿಡಿಯಲು ಹೋಗಿದ್ದ ಮೀನುಗಾರರು ಮೃತಪಟ್ಟ ದುರಂತ (Bhatkal tragedy) ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕಷ್ಟಕ್ಕೆ ತಕ್ಷಣವೇ ಸ್ಪಂದಿಸಿರುವ ಅವರು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತುರ್ತು ಆರ್ಥಿಕ ನೆರವು ಘೋಷಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ದುರಂತದಲ್ಲಿ ಮೃತಪಟ್ಟವರ ವಾರಸುದಾರರಿಗೆ ತಲಾ ೨ ಲಕ್ಷ ರೂಪಾಯಿ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ ೫೦ ಸಾವಿರ ರೂಪಾಯಿಗಳ ಪರಿಹಾರಧನವನ್ನು ಪ್ರಧಾನಿ ಕಾರ್ಯಾಲಯ (PMO) ಪ್ರಕಟಿಸಿದೆ.
Bhatkal tragedy/ ಭಟ್ಕಳ ದುರಂತ: ಮೃತರ ಸಂಖ್ಯೆ ಹತ್ತಕ್ಕೆ ಏರಿಕೆ, ಒಬ್ಬರು ನಾಪತ್ತೆ, ಮೂವರು ಅಸ್ವಸ್ಥ
ಈ ಕುರಿತು ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಕರ್ನಾಟಕದ (Karnataka) ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಸಂಭವಿಸಿದ ದುರಂತದ (Bhatkal tragedy) ಬಗ್ಗೆ ಕೇಳಿ ತೀವ್ರ ಆಘಾತವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮೋದಿ ಹಾರೈಸಿದ್ದಾರೆ.
Chippikallu tragedy/ ಚಿಪ್ಪಿಕಲ್ಲು ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ



