ಭಟ್ಕಳ ಡೈರಿ ವರದಿ
ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ಗಾಂಧಿನಗರದಲ್ಲಿರುವ ಸ್ವಾಮಿ ಕೊರಗಜ್ಜ ಹೋಟೆಲ್ ಎದುರು ಸಾರ್ವಜನಿಕ ಸ್ಥಳದಲ್ಲಿ ಪರವಾನಗಿ ಇಲ್ಲದೆ ಗ್ರಾಹಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರು ಪೊಲೀಸರ ದಾಳಿಯ ವೇಳೆ ಸ್ಥಳದಲ್ಲಿ ಪತ್ತೆಯಾಗಿದ್ದಾರೆ. ತೆಂಗಿನಗುಂಡಿಯ ಪಳ್ಳಿಹಿತ್ಲ ನಿವಾಸಿ ಜಯಂತ ವೆಂಕಟ್ರಮಣ ನಾಯ್ಕ (೪೫) ಆರೋಪಿಯಾಗಿದ್ದು, ಅವರು ಹೋಟೆಲ್ ವ್ಯಾಪಾರ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹೆಬಳೆ ಗ್ರಾಮದ ಗಾಂಧಿನಗರದಲ್ಲಿರುವ ಸ್ವಾಮಿ ಕೊರಗಜ್ಜ ಹೋಟೆಲ್ ಎದುರು ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಪಡೆಯದೆ ಗ್ರಾಹಕರಿಗೆ ಅನಧಿಕೃತವಾಗಿ ಮದ್ಯಪಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಭರಮಪ್ಪ ಬೆಳಗಲಿ ನೇತೃತ್ವದ ತಂಡ ದಾಳಿ ನಡೆಸಿದೆ.
ಇದನ್ನೂ ಓದಿ :
ಭಟ್ಕಳದಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ: ಮೂವರಿಗೆ ಗಾಯ, ಒಬ್ಬ ಗಂಭೀರ
ಭಟ್ಕಳದಲ್ಲಿ ಜಾಗದ ವಿವಾದ: ಎರಡೂ ಕುಟುಂಬಗಳಿಂದ ಪರಸ್ಪರ ಹಲ್ಲೆ ಆರೋಪ, ದೂರು ದಾಖಲು




