ಭಟ್ಕಳ(Bhatkal): ದೇಶವನ್ನು ಪ್ರಗತಿ ಪಥದಲ್ಲಿ ಮುನ್ನೆಡಸಲು ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರದ ಮಾಜಿ ಶಾಸಕಿ (Ex MLA) ರೂಪಾಲಿ ನಾಯ್ಕ (Roopali Naik) ಹೇಳಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅವರು ಸೋಮವಾರ ಮುರ್ಡೇಶ್ವರದ (Murdeshwar) ಮಾವಳ್ಳಿ ಮಹಾಶಕ್ತಿ ಕೇಂದ್ರದ ಕಾಯ್ಕಣಿ ಶಕ್ತಿಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ವಿಶೇಷ ಸಭೆಯಲ್ಲಿರೂಪಾಲಿ ನಾಯ್ಕ (Roopali Naik) ಮಾತನಾಡಿದರು. ಬಿಜೆಪಿ ಸದಸ್ಯತ್ವ ಅಭಿಯಾನದ ವೇಗವನ್ನು ಹೆಚ್ಚಿಸಲು ಭಟ್ಕಳ ಮಂಡಲದ ವತಿಯಿಂದ ಅಭಿಯಾನದಲ್ಲಿ ಕಾರ್ಯಕರ್ತರಿಗೆ ಮನವರಿಕೆ ಮಡಿಕೊಟ್ಟರು.

ಇದನ್ನೂ ಓದಿ : ಪೌರ ಕಾರ್ಮಿಕರ ದಿನಾಚರಣೆ

ಈ ಸಂದರ್ಭದಲ್ಲಿ ಭಟ್ಕಳ ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಹಿಂದುಳಿದ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ಮಾವಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದೇವೇಂದ್ರ ನಾಯ್ಕ, ಕಾಯ್ಕಿಣಿ ಶಕ್ತಿ ಕೇಂದ್ರದ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಶಿವಕುಮಾರ, ಮಂಡಲ ಉಪಾಧ್ಯಕ್ಷ ಮಂಜಪ್ಪ, ಗಣಪತಿ ದೇವಾಡಿಗ, ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಹಿಂದುಳಿದ ಮೋರ್ಚಾ ಅಧ್ಯಕ್ಷ ಉಮೇಶ ನಾಯ್ಕ, ಈಶ್ವರ ದೊಡ್ಮನೆ, ಮಹಿಳಾ ಮೋರ್ಚಾದ ಕುಪ್ಪಾ ಗೊಂಡ, ವಿಜಯಾ ನಾಯ್ಕ, ಬೂತ್ ಅಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು, ಸ್ಥಳೀಯರು ಮತ್ತು ಕಾರ್ಯಕರ್ತರು ಇದ್ದರು.

ಇದನ್ನೂ ಓದಿ : ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ