ಭಟ್ಕಳ: ಇಲ್ಲಿನ ಮುರಿನಕಟ್ಟೆ (Murinakatte) ಧ್ವಂಸ ಪ್ರಕರಣ ಖಂಡಿಸಿ ಹಾಗೂ ಅದೇ ಸ್ಥಳದಲ್ಲಿ ಮರು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಭಟ್ಕಳ ಮಂಡಲದ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು (BJP protest).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashok) ಉಪಸ್ಥಿತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ (BJP protest) ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Murinakatte/ ಮುರಿನಕಟ್ಟೆ ವಿವಾದ ಹಿನ್ನೆಲೆ ೫ ಪ್ರಕರಣ ದಾಖಲು; ೪೦ ಮಂದಿ ವಶಕ್ಕೆ 

ಪಟ್ಟಣದ ಹಳೇ ಬಸ್ ನಿಲ್ದಾಣ ಸಮೀಪದ ಆಟೋ ಚಾಲಕರ–ಮಾಲಕರ ಗಣೇಶೋತ್ಸವ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನಾ ಸಭೆ ನಡೆಸಿದರು. ಅಲ್ಲಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಪ್ರಮುಖ ರಸ್ತೆಗಳಲ್ಲಿ ಸಾಗುತ್ತ ಭಟ್ಕಳ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿದರು. ಮೆರವಣಿಗೆ ವೇಳೆ “ಮುರಿನಕಟ್ಟೆ ಮರು ನಿರ್ಮಾಣಗೊಳ್ಳಬೇಕು”, “ಹಿಂದೂಗಳ ಶ್ರದ್ಧಾ ಕೇಂದ್ರ ಉಳಿಯಬೇಕು” ಎಂಬ ಘೋಷಣೆಗಳು ಮೊಳಗಿದವು.

Murinakatte/ ಮುರಿನಕಟ್ಟೆ ಕೆಡವಿಗೆ ಕಾಂಗ್ರೆಸ್ ಖಂಡನೆ

ಉಪವಿಭಾಗಾಧಿಕಾರಿ ಕಚೇರಿಗೆ ತಲುಪಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಅವರಿಗೆ ಬರೆದ ಮನವಿ ಸಲ್ಲಿಸಿದರು.  ಮನವಿಯಲ್ಲಿ ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಮುರಿನಕಟ್ಟೆಯನ್ನು ಮೂಲ ಸ್ಥಳದಲ್ಲೇ ಮರು ನಿರ್ಮಾಣ ಮಾಡಬೇಕು, ಹಿಂದೂ ಕಾರ್ಯಕರ್ತರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು, ಮಾರಿಕಾಂಬಾ ದೇವಿ ಶಕ್ತಿ ಪೀಠ ಪುನರ್ ನಿರ್ಮಾಣ ಮಾಡಬೇಕು ಹಾಗೂ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

Murinakatte/ ಮುರಿನಕಟ್ಟೆ ಮರುನಿರ್ಮಾಣಕ್ಕೆ ೪೮ ಗಂಟೆ ಗಡುವು 

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್ ಅಶೋಕ, ಸರ್ಕಾರ ಒಂದು ತಿಂಗಳೊಳಗೆ ಮುರಿನಕಟ್ಟೆಯನ್ನು ಮರು ನಿರ್ಮಾಣ ಮಾಡಬೇಕು. ಸರ್ಕಾರ ನಿರ್ಮಿಸದಿದ್ದರೆ ಬಿಜೆಪಿ ಕಾರ್ಯಕರ್ತರೇ ಮುಂದೆ ಬಂದು ಕಟ್ಟೆ ನಿರ್ಮಿಸಲಿದ್ದಾರೆ. ಗ್ರಾನೈಟ್ ಬಳಸಿ ಶಾಶ್ವತ ಕಟ್ಟೆ ನಿರ್ಮಿಸಲು ಬೇಕಾದ ಸಹಕಾರ ನೀಡುವುದಾಗಿ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಮಾತ್ರ ಸೀಮಿತವಾಗದೆ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Murinakatte/ ಮುರಿನಕಟ್ಟೆ  ಕಟ್ಟಿಯೇ ಸಿದ್ದ: ಸುನೀಲ ನಾಯ್ಕ ಘೋಷಣೆ

ಉತ್ತರ ಕನ್ನಡ (Uttara Kannada) ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ‌ ಮಾತನಾಡಿ, ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ, ಮುರಿನಕಟ್ಟೆ ಮರು ನಿರ್ಮಾಣವಾಗುವವರೆಗೆ ಮುಂದುವರಿಯಲಿದೆ ಎಂದು ಹೇಳಿದರು. ಮಾಜಿ ಸಚಿವ ಶಿವಾನಂದ ನಾಯ್ಕ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಹೇಳಿದರು.

police custody/ ಮಧ್ಯರಾತ್ರಿ ಹಿಂದೂ ಕಾರ್ಯಕರ್ತರು ಪೊಲೀಸ್ ವಶಕ್ಕೆ 

ಭಟ್ಕಳ ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಹಲವು ವರ್ಷಗಳಿಂದ ಪೂರ್ವಜರು ಆಚರಿಸಿಕೊಂಡು ಬಂದ ಪರಂಪರೆಯ ಕೇಂದ್ರವನ್ನು ಧ್ವಂಸಗೊಳಿಸಿರುವುದು ನೋವುಂಟು ಮಾಡಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್ ಎಸ್ ಹೆಗಡೆ, ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಹಳಿಯಾಳ ಮಾಜಿ ಶಾಸಕ ಸುನೀಲ ಹೆಗಡೆ, ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಮಾಜಿ ಶಾಸಕ ಸಿದ್ದರಾಮಣ್ಣ, ಗೋವಿಂದ ನಾಯ್ಕ, ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಮತ್ತಿತರರು ಭಾಗವಹಿಸಿದ್ದರು.

Murinakatte/ ಮುರಿನಕಟ್ಟೆಗೆ ಮುಸ್ಲಿಮರಿಂದ ಹಾನಿ: ಹಿಂದೂಗಳಿಂದ ಠಾಣೆಗೆ ಮುತ್ತಿಗೆ