ಕಾರವಾರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನದಿಂದ ವಜಾಗೊಂಡು ಜೈಲು ಸೇರಿದ್ದ ಬಿ ನಾಗೇಂದ್ರ (Minister Nagendra) ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ (state cabinet) ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಉತ್ತರ ಕನ್ನಡ (Uttara Kannada) ಜಿಲ್ಲಾ ಬಿಜೆಪಿ (BJP) ವತಿಯಿಂದ ಕಾರವಾರದಲ್ಲಿ (Karwar) ಪ್ರತಿಭಟನೆ ನಡೆಸಲಾಗುತ್ತಿದೆ (BJP protest).

Ration distribution/ ಭಟ್ಕಳದಲ್ಲಿ ಸರ್ವರ್ ಸಮಸ್ಯೆಗೆ ಸಿಲುಕಿದ ಪಡಿತರ ವಿತರಣೆ: ಜನರು, ನ್ಯಾಯಬೆಲೆ ಅಂಗಡಿಕಾರರು ಹೈರಾಣು

ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಜಿಲ್ಲಾ ಮಟ್ಟದ ಪ್ರತಿಭಟನೆಯ ನಾಲ್ಕನೇ ದಿನವಾದ ಶುಕ್ರವಾರ (friday) ಭಟ್ಕಳ ವಿಧಾನಸಭಾ ಕ್ಷೇತ್ರದ (Bhatkal constituency) ಬಿಜೆಪಿ ಕಾರ್ಯಕರ್ತರು (BJP activists) ಹಾಗೂ ಮುಖಂಡರು (BJP leaders) ಪಾಲ್ಗೊಂಡು ರಾಜ್ಯ ಸರ್ಕಾರದ (state government) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Devaraj Urs/ ದೇವರಾಜ ಅರಸು ಜನ್ಮದಿನಾಚರಣೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ₹197 ಕೋಟಿ ಹಣವನ್ನು ಬೇನಾಮಿ ಖಾತೆಗಳಿಗೆ ವರ್ಗಾಯಿಸಿ ಬಹುಕೋಟಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಅವರನ್ನು ಇದೀಗ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು (BJP protest).

Impact/ ‘ಭಟ್ಕಳ ಡೈರಿ’ ವರದಿ ಫಲಶ್ರುತಿ: ತ್ಯಾಜ್ಯ ತೆರವುಗೊಳಿಸಿದ ಭಟ್ಕಳ ನಗರಸಭೆ

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವ (former minister) ಶಿವಾನಂದ ನಾಯ್ಕ (Shivanand Naik), ಮಾಜಿ ಶಾಸಕ (former MLA) ಸುನಿಲ ನಾಯ್ಕ ಸಹಿತ ಭಟ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Transfer/ ಭಟ್ಕಳದ ಇಬ್ಬರು ಕಂದಾಯ ಶಿರಸ್ತೇದಾರರ ವರ್ಗಾವಣೆ