ಭಟ್ಕಳ (Bhatkal): ರಾಜ್ಯ ಸರ್ಕಾರದ ವಕ್ಫ್‌ ಬೋರ್ಡ್ (Waqf board) ನೀತಿ ಖಂಡಿಸಿ ಸೋಮವಾರ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ನಡೆಸಿ (BJP Protest), ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ (Narendra Modi) ನೇತೃತ್ವದ  ಸರಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್‌ ಮಂಡಳಿಯಲ್ಲಿ ಆಗುತ್ತಿರುವ ಅಕ್ರಮಗಳನ್ನು ನೋಡಿಕೊಂಡು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ಕಾಯ್ದೆ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್‌ ಬೋರ್ಡ್‌ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ  ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ (Congress) ಸರಕಾರ ಹಾಗೂ ಸಚಿವ ಜಮೀರ್ ಅಹಮದ್ (Zameer Ahmed) ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :  ಭುವನೇಶ್ವರಿಗೆ ಅಗೌರವ; ಕಸಾಪ ಖಂಡನೆ

ವಕ್ಫ್‌ ಬೋರ್ಡಿನಿಂದ  ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರಕಾರದ ವಿವೇಚನೆಯಿಲ್ಲದೆ ಕೈಗೊಳ್ಳುತ್ತಿರುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತಿದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಇದು ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ ಸಿದ್ಧರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಮೈಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ !

ಇದೇ ತೆರನಾದ ನಿಲುವುಗಳನ್ನು ಮುಂದುವರೆಸಿದಲ್ಲಿ ರಾಜ್ಯದಲ್ಲಿ ಮುಂದಾಗುವ ಅನಾಹುತಗಳಿಗೆ ಕಾಂಗ್ರೆಸ್ ಸರಕಾರವೇ ನೇರವಾಗಿ ಹೊಣೆಯಾಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್‌ ಸರಕಾರ ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ಓಲೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕೆಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ :   ಬಡವರ ಚಿಕಿತ್ಸೆಗೆ ಯಂಗ್‌ ಒನ್‌ ಇಂಡಿಯಾ ಸ್ಪಂದನೆ

ಭಟ್ಕಳ ಸಹಾಯಕ ಕಮೀಷನರ್‌ ಡಾ.ನಯನ ಅವರಿಗೆ  ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಸುನೀಲ ನಾಯ್ಕ ಮನವಿ ಪತ್ರ ಸಲ್ಲಿಸಿದರು. ಇದಕ್ಕೂ ಪೂರ್ವದಲ್ಲಿ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು. ಮೆರವಣಿಗೆಯು ಸಂಶುದ್ದಿನ್ ಸರ್ಕಲ್ ಮೂಲಕ ತಾಲೂಕು ಆಡಳಿತ ಸೌಧದವರೆಗೆ (BJP protest) ನಡೆಯಿತು. ಮಾಜಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಹಿರಿಯ ಮುಖಂಡ ಕೃಷ್ಣ ನಾಯ್ಕ ಆಸರಕೇರಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ :   ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಘೋಷಣೆ

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾದ ಸುಬ್ರಾಯ ದೇವಾಡಿಗ ಮತ್ತು ಶ್ರೀಕಾಂತ ನಾಯ್ಕ,  ಭಟ್ಕಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ನಾಯ್ಕ ಮತ್ತು ಶ್ರೀಧರ ನಾಯ್ಕ , ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ರವಿ ನಾಯ್ಕ ಜಾಲಿ, ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂರ್ತಿ ಹೆಗ್ಡೆ, ಪಂಚಾಯತ ರಾಜ್ಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಮೋಹನ ನಾಯ್ಕ, ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಸುರೇಶ ನಾಯ್ಕ ಕೋಣೆಮನೆ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ಪ್ರತಿಭಟನೆಯ ವಿಡಿಯೋವನ್ನುಯೂಟ್ಯೂಬ್ ಚಾನೆಲ್ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ :  ವಕೀಲಗೆ ಕಲಾಸಿರಿ ಪ್ರಶಸ್ತಿ ಪ್ರದಾನ