ಭಟ್ಕಳ (Bhatkal) : ತಮ್ಮನ್ನು ತಾವು ನಿಗ್ರಹಿಸಿಕೊಂಡು ಒಂದು ಸಾರ್ಥಕತೆಯನ್ನು ಪಡೆಯುವಲ್ಲಿ ಮಾರ್ಷಲ್ ಆರ್ಟ್ಸ (Martial Arts) ಸಹಕಾರಿ. ಇದನ್ನು ಕರಗತಮಾಡಿಕೊಂಡು ೨೨ ವಿದ್ಯಾರ್ಥಿಗಳು ಕರಾಟೆ (Karate) ಬ್ಲ್ಯಾಕ್ ಬೆಲ್ಟ್ (black belt) ಪಡೆದು ಸಾಧನೆ ಮೆರೆದಿರುವದು ಅಭಿನಂದನೀಯ ಎಂದು ಬೀನಾ ವೈದ್ಯ ಎಜುಕೇಶನಲ್ ಟ್ರಸ್ಟ್ನ ಎಂ.ಡಿ. ಪುಷ್ಪಲತಾ ವೈದ್ಯ ಹೇಳಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರು ಪಟ್ಟಣದ ಕುದುರೆ ಬೀರಪ್ಪ ಸಭಾಭವನದಲ್ಲಿ ನಡೆದ ಶೋಟೋಕಾನ್ ಕರಾಟೆ ಇನ್ಸಿಟ್ಯೂಟ್‌ನ ೧೨ನೇ ಬ್ಲ್ಯಾಕ್ ಬೆಲ್ಟ್ (black belt) ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶೋಟೋಕಾನ ಕರಾಟೆ ಇನ್ಸ್‌ಟಿಟ್ಯೂಟ್ ಅತಿ ಕಡಿಮೆ ಶುಲ್ಕ ಪಡೆದು ಮಕ್ಕಳಿಗೆ ತರಬೇತಿ ನೀಡುತ್ತಿದೆ. ಅದರಲ್ಲೂ ಕುದುರೆ ಬೀರಪ್ಪ ದೇವಸ್ಥಾನದ ಭೂದಾನ ಸಮಿತಿಗೆ ತಮ್ಮದೇ ಆದ ಕೊಡುಗೆ ನೀಡಿ ಸಮಾಜಕ್ಕೆ ನಮ್ಮಿಂದ ಆದ ಸಹಾಯ ಮಾಡಬೇಕು ಎನ್ನುವದನ್ನು ತೋರಿಸಿಕೊಟ್ಟಿದ್ದಾರೆ ಎಂದರು.
ಇದನ್ನೂ ಓದಿ : police raid/ ಇಬ್ಬರ ಬಂಧನ; ನಾಲ್ವರು ಪರಾರಿ
ಅಧ್ಯಕ್ಷತೆ ವಹಿಸಿದ್ದ ಜ್ಞಾನೇಶ್ವರಿ ಡಿಎಡ್ ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಮಾತನಾಡಿ, ಮಕ್ಕಳಿಗೆ ಸಣ್ಣ ಮೌಲ್ಯಗಳ ಅರಿವು ಮೂಡಿಸಬೇಕು. ಮಕ್ಕಳ ಎದುರು ಪಾಲಕರು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು. ವಾರದಲ್ಲಿ ಒಂದು ದಿನವಾದರೂ ಮಕ್ಕಳನ್ನು ಮಂದಿರಕ್ಕೆ ಕರೆದುಕೊಂಡು ಹೋಗುವ ಪರಿಪಾಠ ಬೆಳೆಸಬೇಕು. ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು.
ಇದನ್ನೂ ಓದಿ : scooty accident/ ಸ್ಕೂಟಿ ಅಪಘಾತದಲ್ಲಿ ಯುವತಿಯರಿಬ್ಬರಿಗೆ ಗಾಯ
ಪತ್ರಕರ್ತ ರಾಮಚಂದ್ರ ಕಿಣಿ, ವಿದ್ಯಾಂಜಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪಾ ರಮೇಶ ಖಾರ್ವಿ, ಡಾ. ಕಮಲಾ ನಾಯಕ, ವಕೀಲ ರಾಜೇಶ ನಾಯ್ಕ ಮಾತನಾಡಿದರು. ಕುದುರೆ ಬೀರಪ್ಪ ದೇವಸ್ಥಾನದ ಭೂದಾನ ಸಮಿತಿ ಅಧ್ಯಕ್ಷ ವೆಂಕಟೇಶ ನಾಯ್ಕ, ಹನ್ಸಿ ಸಿ. ರಾಜನ್ ೨೨ ವಿದ್ಯಾರ್ಥಿಗಳಿಗೆ ಬ್ಲ್ಯಾಕ್ ಬೆಲ್ಟ್ ಪ್ರದಾನ ಮಾಡಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.
ಇದನ್ನೂ ಓದಿ : Sentence announced/ ನಾಲ್ವರನ್ನು ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆ ಪ್ರಕಟ
ಬ್ಲ್ಯಾಕ್ ಬೆಲ್ಟ್ ಪಡೆದ ವಿದ್ಯಾರ್ಥಿಗಳು ವಿವಿಧ ಸಾಹಸಮಯ ಪ್ರದರ್ಶನ ನೀಡಿ ಸಾರ್ವಜನಿಕರನ್ನು ರೋಮಾಂಚನಗೊಳಿಸಿದರು. ಕರಾಟೆ ಶಿಕ್ಷಕರಾದ ಸುರೇಶ ಮೊಗೇರ, ನಾಗರಾಜ ದೇವಾಡಿಗ, ಆರ್ಯನ್ ವಾಸು ನಾಯ್ಕ, ರಾಜಶೇಖರ ಗೌಡ, ಮಂಜುನಾಥ ದೇವಾಡಿಗ, ಪ್ರವೀಣ ಹರಿಜನ, ವಿನೋದ ಗೊಂಡ, ಗೋಪಾಲ ನಾಯ್ಕ, ಅಂಜಲಿ ಕಾಮತ ಕಾರ್ಯಕ್ರಮ ನಿರ್ವಹಿಸುವಲ್ಲಿ ಸಹಕರಿಸಿದರು.
ಇದನ್ನೂ ಓದಿ : Auto Hit/ ಆಟೋ ಡಿಕ್ಕಿಯಾಗಿ ಹೆದ್ದಾರಿ ಪಕ್ಕ ನಿಂತಿದ್ದವ ಸಾವು