ಭಟ್ಕಳ(Bhatkal) : ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯಲ್ಲಿರುವ ಕರಿಕಲ್ ಧ್ಯಾನ ಮಂದಿರಕ್ಕೆ ವಿವಿಧ ಗಣ್ಯರು ಭೇಟಿ ನೀಡಿದರು. ಈ ಸಂದರ್ಭ ೩೮ನೇ ದಿನದ ಚಾತುರ್ಮಾಸ್ಯ (Chathurmasya) ವ್ರತದಲ್ಲಿರುವ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ (Brahman and saraswathi swamiji) ಆಶೀರ್ವಾದ ಪಡೆದು ಮಂತ್ರಾಕ್ಷತೆ ಪಡೆದುಕೊಂಡರು(blessings).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

38ನೇ ದಿನದ ಸೇವಾಕೈಂಕರ್ಯವನ್ನು ಶಿರಸಿ ನಾಮಧಾರಿ ಸಂಘ ಹಾಗೂ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿಯಿಂದ ನಡೆಯಿತು. ಬೆಳಗ್ಗೆ ೧೧ರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಮಧ್ಯಾಹ್ನ ೧೨ರಿಂದ ಶ್ರೀ ಗುರುಗಳ ಪಾದಪೂಜೆ, ಮಂತ್ರಾಕ್ಷತೆ ವಿತರಣೆ ನಡೆಯಿತು.

ಇದನ್ನೂ ಓದಿ : ಆಗಸ್ಟ್‌ ೨೭ರಂದು ವಿವಿಧೆಡೆ ಅಡಿಕೆ ಧಾರಣೆ

ಶಿರಸಿ ಶಾಸಕ ಭೀಮಣ್ಣ ನಾಯ್ಕ ತಮ್ಮ ಕುಟುಂಬ ಸಮೇತರಾಗಿ ಶಿರಸಿ ನಾಮಧಾರಿ ಸಂಘದ ಜೊತೆಯಲ್ಲಿ ಶ್ರೀಗಳ ಪಾದಪೂಜೆ ನೆರವೇರಿಸಿದರು. ಸಿಗಂದೂರು ದೇವಸ್ಥಾನ ಧರ್ಮದರ್ಶಿ ರಾಮಪ್ಪನವರ ಪುತ್ರ ರವಿಕುಮಾರ ಕೂಡ ತಮ್ಮ ಕುಟುಂಬ ಸಮೇತರಾಗಿ ಈ ಸಂದರ್ಭ ಶ್ರೀಗಳ ಪಾದ ಪೂಜೆ ನೆರವೇರಿಸಿ, ಶ್ರೀಗಳಿಂದ ಮಂತ್ರಾಕ್ಷತೆ ಪಡೆದುಕೊಂಡರು(blessings).

ಇದನ್ನೂ ಓದಿ : ಬೈಕ್‌ ಡಿಕ್ಕಿಯಾಗಿ ಪಾದಚಾರಿಗೆ ಗಾಯ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ ಪೂಜಾರಿ,
ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನಲ್ಲಿ ನಡೆದ ಏಷ್ಯಾ-ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದ ಅಕ್ಷತಾ ಪೂಜಾರಿ ಬೋಳ  ಶ್ರೀಗಳ ಆಶೀರ್ವಾದ ಮಂತ್ರಾಕ್ಷತೆ ಸ್ವೀಕರಿಸಿದರು. ಭಟ್ಕಳ ಪತ್ರಕರ್ತರು ಕೂಡ ಇದೇ ವೇಳೆ ಶ್ರೀಗಳ ಆಶೀರ್ವಾದ ಮತ್ತು ಮಂತ್ರಾಕ್ಷತೆ ಪಡೆದುಕೊಂಡರು.

ಈ ಸುದ್ದಿಗೆ ಸಂಬಂಧಿಸಿದ ವಿಡಿಯೋ ಯೂಟ್ಯೂಬ್ ಚಾನೆಲ್ಫೇಸ್‌ಬುಕ್‌ ಮತ್ತು ಇನ್ಸ್ಟಾಗ್ರಾಂನಲ್ಲಿ ವೀಕ್ಷಿಸಬಹುದು.