ಭಟ್ಕಳ ಡೈರಿ ವರದಿ
ಉಪ್ಪೂರು: ಉಪ್ಪೂರು ಪರಾರಿ ಗ್ರಾಮದ ಶ್ರೀ ಬೊಬ್ಬರ್ಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಒಂದು ಲಕ್ಷ ರೂಪಾಯಿ ಅನುದಾನ ನೀಡಲಾಯಿತು. ಜೀರ್ಣೋದ್ಧಾರ ಕಾರ್ಯಕ್ಕೆ ನೀಡಲಾದ ₹೧ ಲಕ್ಷ ಮೊತ್ತದ ಚೆಕ್ನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುರುರಾಜ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು.
ಉಡುಪಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಜು ಪೂಜಾರಿ ಹಾಗೂ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಅವರು ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀಶ ಭಟ್ ಪರಾರಿ, ಗೌರವಾಧ್ಯಕ್ಷ ಸತೀಶ್ ಪೂಜಾರಿ, ಕೀಳಂಜೆ–ಉಪ್ಪೂರು ವಲಯ ಅಧ್ಯಕ್ಷ ಸುನಿಲ್ ಶೆಟ್ಟಿ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ಜಯಕರ ಆಚಾರ್ಯ, ಉಪಾಧ್ಯಕ್ಷೆ ಜ್ಯೋತಿ ಪಾಟೀಲ, ಕೋಶಾಧಿಕಾರಿ ಕೃಷ್ಣರಾಜ ಭಟ್, ಗುರಿಕಾರ ಗಣೇಶ ನಾಯ್ಕ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಮಾಜ ಸೇವಕಿ ರೇಖಾ ಜಿ ಮರಾಠಿ, ಒಕ್ಕೂಟದ ಪದಾಧಿಕಾರಿಗಳಾದ ಸುನೀತಾ ಹಾಗೂ ಸುನಂದಾ, ವಲಯ ಮೇಲ್ವಿಚಾರಕರಾದ ರಾಮು ಹಾಗೂ ಸ್ಥಳೀಯ ಸೇವಾ ಪ್ರತಿನಿಧಿ ಸುಧಾಕರ ಉಪಸ್ಥಿತರಿದ್ದರು. ಸ್ಥಳೀಯ ಗ್ರಾಮಸ್ಥರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೊರೆತ ನೆರವಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ:
raksha bandhan/ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ಬೆಳೆಸಿದ ರಕ್ಷಾ ಬಂಧನ
agricultural road/ ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ ಸ್ಥಳ ಪರಿಶೀಲನೆಗೆ ಆಗ್ರಹ
