ಭಟ್ಕಳ: ತಾಲೂಕಿನ ಕರಿಕಲ್ ಸಮುದ್ರ ಕಿನಾರೆಯಲ್ಲಿರುವ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಶನಿವಾರ ರಾತ್ರಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮೊದಲು ಕರಿಕಲ್ ಧ್ಯಾನ ಮಂದಿರದ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ಸಮಸ್ತ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿಕೊಂಡರು ಬಳಿಕ ಸ್ವಾಮೀಜಿಯವರಿಗೆ ಸಚಿವ ಮಧು ಬಂಗಾರಪ್ಪ ತುಳಿಸಿ ಮಾಲೆ ಹಾಕಿದರು. ನಂತರ ಸಚಿವರಿಗೆ ಸ್ವಾಮೀಜಿಯವರು ಸನ್ಮಾನಿಸಿ ಮಂತ್ರಾಕ್ಷತೆ ನೀಡಿದರು. ಬಳಿಕ ಸ್ವಾಮೀಜಿಯವರು ಕೆಲ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ನಂತರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಸಚಿವ ಮಧು ಬಂಗಾರಪ್ಪ (Madhu Bangarappa)ನವರೊಂದಿಗೆ ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ , ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಹಾಗೂ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ : ಅಂಬಿಗರಿಂದ ಉಸ್ತುವಾರಿ ಸಚಿವರಿಗೆ ಮನವಿ