ಭಟ್ಕಳ (Bhatkal) : Breaking news/ ಶಾಲೆಯಿಂದ ಆಯೋಜಿಸಲಾಗಿದ್ದ ಪ್ರವಾಸಕ್ಕೆ (school tour) ಬಂದಿದ್ದ ವಿದ್ಯಾರ್ಥಿಯೋರ್ವ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಇಂದು ಬುಧವಾರ ಸಂಜೆ ೭.೩೦ರ ಸುಮಾರಿಗೆ ಭಟ್ಕಳದಲ್ಲಿ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗ (Yelburga) ತಾಲೂಕಿನ ಗಾಣದಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೮ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ (೧೪) ಮೃತ ದುರ್ದೈವಿ. ಭಟ್ಕಳದ ತಾಲೂಕು ಪಂಚಾಯತ ಎದುರಿನ ಖಾಲಿ ಜಾಗದಲ್ಲಿ ಮೂತ್ರ ವಿಸರ್ಜನೆಗೆಂದು ಹೋದಾಗ ತೆರೆದ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಇದನ್ನೂ ಓದಿ : ಮದ್ಯ ಸೇವಿಸಿ ಬೈಕ್ ಚಲಾಯಿಸಿದ್ದಕ್ಕೆ ದಂಡ

ಗಾಣದಾಳ ಶಾಲೆಯ ೧೦೦ ವಿದ್ಯಾರ್ಥಿಗಳು ಜೋಗ ಫಾಲ್ಸ್‌ (Jog falls), ಕೊಲ್ಲೂರು (Kollur) ಮತ್ತಿತರ ಕಡೆ ಪ್ರವಾಸಕ್ಕೆಂದು ಎರಡು ಬಸ್ಸುಗಳಲ್ಲಿ ಬಂದಿದ್ದರು. ಇವರೊಂದಿಗೆ ೧೩ ಜನ ಶಿಕ್ಷಕರಿದ್ದರು. ನಿನ್ನೆ ರಾತ್ರಿ ಗಾಣದಾಳದಿಂದ ಹೊರಟಿದ್ದ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಜೋಗ ಜಲಪಾತ ವೀಕ್ಷಿಸಿದ್ದರು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಅರಬೈಲ್‌ ಘಟ್ಟದ (Arbail Ghat) ಮೂಲಕ ಹೊನ್ನಾವರ (Honnavar) ಮಾರ್ಗವಾಗಿ ತೆರಳುತ್ತಿದ್ದರು. ಮಾರ್ಗ ಮಧ್ಯ ಭಟ್ಕಳದಲ್ಲಿ ಗುಳಿಗೆ ಖರೀದಿಗಾಗಿ ನಿಲ್ಲಿಸಲಾಗಿತ್ತು. ತಾಲೂಕು ಪಂಚಾಯತ್‌ ಕಚೇರಿ ಎದುರಿನ ಔಷಧಿ ಅಂಗಡಿಯಲ್ಲಿ ಗುಳಿಗೆ ಖರೀದಿಸಲು ವಾಹನ ನಿಲ್ಲಿಸಲಾಗಿತ್ತು.

ವಿಡಿಯೋ ಸಹಿತ ಇದನ್ನೂ ಓದಿ : KSRTC/ ಡಿ.೩೧ರಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ

ಈ ಸಂದರ್ಭ ಕೆಲವು ಬಾಲಕರು ಮೂತ್ರ ವಿಸರ್ಜನೆಗೆಂದು ಔಷಧಿ ಅಂಗಡಿಯ ಹಿಂದಿರುವ ಖುಲ್ಲಾ ಜಾಗಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕತ್ತಲಾಗಿದ್ದರಿಂದ ತಡೆಗೋಡೆ ಇಲ್ಲದ ತೆರೆದ ಬಾವಿಗೆ ಬಾಲಕ ಬಿದ್ದಿದ್ದಾನೆ. ತಕ್ಷಣ ಜೊತೆಗಿದ್ದ ಬಾಲಕರು ಕೂಗಿದ್ದರಿಂದ ಸ್ಥಳೀಯರು ದೌಡಾಯಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಾಲಕನನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಅಸ್ವಸ್ಥಗೊಂಡ ಬಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. (Breaking News)

ಇದನ್ನೂ ಓದಿ :  ಬೈಕುಗಳ ನಡುವೆ ಡಿಕ್ಕಿ; ಮಹಿಳೆಗೆ ಗಾಯ

ಸುದ್ದಿ ತಿಳಿದು ತಹಶೀಲ್ದಾರ ನಾಗೇಂದ್ರ ಶೆಟ್ಟಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಭಟ್ಕಳದ ಪ್ರವಾಸಿ ಮಂದಿರದಲ್ಲಿ ರಾತ್ರಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯ ವಿಡಿಯೋವನ್ನು  ಯೂಟ್ಯೂಬ್ಇನ್ಸ್ಟಾಗ್ರಾಂ  ಮತ್ತು ಫೇಸ್‌ಬುಕ್‌ ನಲ್ಲಿ ವೀಕ್ಷಿಸಬಹುದು.