ಹಳಿಯಾಳ(Haliyal) : ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಮೊನ್ನೆಯಷ್ಟೇ ವಾಕರಸಾ ಸಂಸ್ಥೆಯ ಬಸ್ಸೊಂದು ಬೈಕ್ ಸವಾರನಿಗೆ ಹಿಂಬದಿಯಿಂದ ಗುದ್ದಿದ ಘಟನೆ ನಡೆದಿತ್ತು. ಇದೀಗ ಹಳಿಯಾಳದಲ್ಲೂ ಇಂಥದ್ದೇ ಘಟನೆ ನಡೆದಿದೆ. ವಾಕರಸಾ ಸಂಸ್ಥೆಯ ಬಸ್ ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು (Bus Accident) ಸವಾರ ಗಾಯಗೊಂಡ ಘಟನೆ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ತೇರಗಾಂವ ಕಡೆಯಿಂದ ಹಳಿಯಾಳ ಕಡೆಗೆ ಅತಿವೇಗ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿದ್ದ ವಾಕರಸಾ ಬಸ್ ಚಾಲಕ ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ (Bus Accident). ಪರಿಣಾಮ ಬೈಕ್ ಸವಾರ ಮೈಲಾರ ನಿಂಗಪ್ಪ ಕಾರಲಗಿ ಗಾಯಗೊಂಡವರು. ಅವರನ್ನು ಚಿಕಿತ್ಸೆಗಾಗಿ ಧಾರವಾಡಕ್ಕೆ ಸಾಗಿಸಲಾಗಿಸಲಾಗಿದೆ. ಗಾಯಾಳು ಮೈಲಾರ ಅವರ ಸಹೋದರ ಮಂಜುನಾಥ ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ(Case Registered). ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕುಮಟಾದಲ್ಲಿ ಬಸ್ ಡಿಕ್ಕಿಯಾಗಿ ಬೈಕ್ ಸವಾರಗೆ ಗಾಯ