ಬೆಂಗಳೂರು (Bengaluru): ರಾಜ್ಯ ಸರ್ಕಾರ (State Government) ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು (Bus fares) ಶೇ.೧೫ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇಂದು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು (Bus fares) ಶೇ.೧೫ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.
ಬಿಎಂಟಿಸಿ, ಕೆಎಸ್‍ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಈ ಹಿಂದೆ ಶೇ. ೪೦ ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಡೀಸೆಲ್ ಬೆಲೆಯ ಏರಿಕೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಚಿದರಂಬರಂ, ಜೀತು ಮಾಧವನ್‌ ಜೋಡಿಯಲ್ಲಿ ಹೊಸ ಚಿತ್ರ

‘ಬಿಎಂಟಿಸಿ ಬಸ್ ದರಗಳನ್ನು ೨೦೧೪ರಲ್ಲಿ ಮತ್ತು ಕೆಎಸ್‍ಆರ್‍ಟಿಸಿ, ಕೆಕೆಆರ್‍ಟಿಸಿ ಮತ್ತು ಎನ್‍ಡಬ್ಲ್ಯುಕೆಆರ್‍ಟಿಸಿಯ ದರಗಳನ್ನು ೨೦೨೦ರಲ್ಲಿ ಪರಿಷ್ಕರಿಸಲಾಗಿತ್ತು. ದರ ಪರಿಷ್ಕರಣೆ ನಂತರ ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆಗಳು ಏರಿಕೆಯಾಗಿವೆ. ಜತೆಗೆ ಸಿಬ್ಬಂದಿ ವೇತನವೂ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ’ ಎಂದು ಸಾರಿಗೆ ಸಚಿವ (Transport Minister) ರಾಮಲಿಂಗಾರೆಡ್ಡಿ (Rama linga Reddy) ಅವರು ಇತ್ತೀಚಿಗೆ ಹೇಳಿದ್ದರು.

ಇದನ್ನೂ ಓದಿ: ವಿಮಾನದ ಶೌಚಾಲಯದಲ್ಲಿ ೨ ಕೋಟಿ ಚಿನ್ನ, ಭಟ್ಕಳದ ವ್ಯಕ್ತಿ ಬಂಧನ