ಭಟ್ಕಳ: ಗ್ರಾಮಸ್ಥರ ಅನುಕೂಲಕ್ಕಾಗಿ ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ವತಿಯಿಂದ ನಿರ್ಮಿಸಿದ ಬಸ್ ತಂಗುದಾಣವನ್ನು (Bus stand) ಸಂಘದ ಅಧ್ಯಕ್ಷ ಮಾದೇವ ನಾಯ್ಕ ಉದ್ಘಾಟಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ನಂತರ ಮಾತನಾಡಿದ ಮಾದೇವ ನಾಯ್ಕ, ಈ ಭಾಗದಲ್ಲಿ ಬಹುದಿನಗಳಿಂದ ಬಸ್ ತಂಗುದಾಣ (Bus stand) ಮಾಡಬೇಕೆಂದು ಇಲ್ಲಿನ ಸಾರ್ವಜನಿಕರಿಂದ ಬೇಡಿಕೆ ಇತ್ತು. ಶಾಲಾ ಕಾಲೇಜು ವಿದ್ಯಾರ್ಥಿಗಳು, ಈ ಗ್ರಾಮದ ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿಗೆ ಬರುವವರು ಮಳೆಯಲ್ಲಿ ಛತ್ರಿ ಹಿಡಿದುಕೊಂಡು ನಿಲ್ಲುತ್ತಿರುವುದನ್ನು ನೋಡಲು ಬೇಸರವಾಗುತ್ತಿತ್ತು. ಇದನ್ನು ಮನಗೊಂಡು ನಮ್ಮ ಸಂಘದ ವತಿಯಿಂದ ಈ ಬಸ್ ತಂಗುದಾಣ ನಿರ್ಮಿಸಿಕೊಟ್ಟಿದ್ದೇವೆ. ಇದರ ಉಪಯೋಗವನ್ನು ಬೆಳೆಕೆ ಗ್ರಾಮದ ಸಾರ್ವಜನಿಕರು ಪಡೆದುಕೊಳ್ಳಬೇಕು. ಇದು ನಿಮ್ಮೆಲ್ಲರ ಅಸ್ತಿಯಾಗಿದ್ದು ಇದನ್ನು ಸುರಕ್ಷಿತವಾಗಿ ಮತ್ತು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಕಿವಿ ಮಾತು ಹೇಳಿದರು.
ಇದನ್ನೂ ಓದಿ : ಭಟ್ಕಳ ತಾಲೂಕು ಪದವಿ ಪೂರ್ವ ಕ್ರೀಡಾಕೂಟ ಆರಂಭ
ಐ.ಆರ್.ಬಿ. ನಿರ್ಲಕ್ಷ್ಯ :
ಬೆಳಕೆ ಗ್ರಾಮ ಪಂಚಾಯತ ಅಧ್ಯಕ್ಷ ಜಗದೀಶ ನಾಯ್ಕ ಮಾತನಾಡಿ, ಸಂಘದ ವತಿಯಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಕೊಟ್ಟಿರುವುದು ಉತ್ತಮ ಕೆಲಸವಾಗಿದೆ. ಇದು ಒಂದು ಸಮಾಜಮುಖಿ ಕೆಲಸವಾಗಿದೆ. ಈ ಭಾಗದಲ್ಲಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಬಸ್ ನಿಲ್ದಾಣ ಮಾಡಿಕೊಡುವಂತೆ ಐ.ಆರ್.ಬಿ. ಕಂಪನಿಗೆ (IRB infrastructure) ಎಷ್ಟು ಪತ್ರ ಬರೆದರೂ ಅದಕ್ಕೆ ಯಾವುದೇ ಸ್ಪಂದನೆ ದೊರೆತಿರಲಿಲ್ಲ. ಆದರೆ ಊರಿನ ಹಿತದೃಷ್ಟಿಯಿಂದ ಬೆಳಕೆ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘದ ಮಾದೇವ ನಾಯ್ಕ ಅಧ್ಯಕ್ಷತೆಯಲ್ಲಿ ಬಸ್ ತಂಗುದಾಣ ನಿರ್ಮಾಣ ಆಗಿರುವುದು ಸಂತೋಷದ ವಿಷಯವಾಗಿದೆ. ಹಿಂದಿನ ದಿನಗಳಲ್ಲಿ ಭಾಗದ ಜನರು ಕುಂದಾಪುರ, ಉಡುಪಿಗೆ ತೆರಳಲು ಬಿಸಿಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು. ಆದರೆ ಈಗ ಈ ಬಸ್ ತಂಗುದಾಣ ನಿರ್ಮಾಣವಾಗಿರುವುದು ನಮ್ಮೂರಿನ ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದರು.
ಇದನ್ನೂ ಓದಿ : ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ?
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪಾಂಡು ನಾಯ್ಕ, ನಿರ್ದೇಶಕರಾದ ಲಕ್ಷ್ಮೀನಾರಾಯಣ ನಾಯ್ಕ, ದಾಮೋದರ ನಾಯ್ಕ, ಲೋಕೇಶ ನಾಯ್ಕ, ಮಂಜು ಮೊಗೇರ, ಭಾಸ್ಕರ ಗೊಂಡ, ರವಿರಾಜ ಜೈನ್, ಲಲಿತಾ ನಾಯ್ಕ, ಭಾರತಿ ನಾಯ್ಕ, ನಾಗೇಶ ನಾಯ್ಕ, ಶಾರದಾ ನಾಯ್ಕ, ಪ್ರಧಾನ ವ್ಯವಸ್ಥಾಪಕ ಅಣ್ಣಪ್ಪ ನಾಯ್ಕ, ಸಂಘದ ಷೇರುದಾರರು, ಎಸ್.ಡಿ.ಎಂ.ಸಿ. ಸದಸ್ಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಈ ಸುದ್ದಿಯ ವಿಡಿಯೋ ಯೂಟ್ಯೂಬ್ ಚಾನೆಲ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ವೀಕ್ಷಿಸಬಹುದು.