ಭಟ್ಕಳ (Bhatkal) : ಭಾನುವಾರ ಅಕ್ರಮ ಸಾಗಾಟದ ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ಕೂಡ ಕಸಾಯಿಖಾನೆಗೆ ಸಾಗಿಸಲು ಮಹಾರಾಷ್ಟ್ರದಿಂದ ಭಟ್ಕಳಕ್ಕೆ ಬರುತ್ತಿದ್ದ ೧೩ ಜಾನುವಾರುಗಳನ್ನು ರಕ್ಷಿಸಿದ್ದಾರೆ (cattle protect).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಸಹಿತ ಓರ್ವನನ್ನು ಬಂಧಿಸಿರುವ ಪೊಲೀಸರು, ಮೂವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (೪೯) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ : bike collision/ ಬೈಕುಗಳ ಡಿಕ್ಕಿಗೆ ನಾಲ್ವರಿಗೆ ಗಾಯ
ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಲಾರಿ ತಡೆಹಿಡಿದ ಪೊಲೀಸರು ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ೯ ಎತ್ತು ಮತ್ತು ೪ ಕೋಣಗಳನ್ನು ರಕ್ಷಿಸಿದ್ದಾರೆ (cattle protect). ಇವುಗಳು ಮಹಾರಾಷ್ಟ್ರದ (Maharashtra) ಪಾಲೆಗಾಂವ್‌ನಿಂದ ಭಟ್ಕಳಕ್ಕೆ ಬರುತ್ತಿತ್ತು ಎನ್ನಲಾಗಿದೆ. ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲಾತಿಗಳು ಸಿಕ್ಕಿಲ್ಲ. ಇವುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಡಿಯೋ ಸಹಿತ ಇದನ್ನೂ ಓದಿ : Cricket fans/ ಭಟ್ಕಳದಲ್ಲಿ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ
ಹಿಂದು ಜಾಗರಣಾ ವೇದಿಕೆ (HJV) ಮತ್ತು ಬಿಜೆಪಿ (BJP) ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ ಕೆ. ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್ಐ ಕೃಷ್ಣಾನಂದ ನಾಯ್ಕ, ಪಿಸಿ ಬಸವರಾಜ ಡಿ.ಕೆ., ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ.ಪಿ., ಅಂಬರೀಶ ಕುಂಬಾರಿ, ಕಿರಣ ತಿಳಗಂಜಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಹಿಂದು ಜಾಗರಣಾ ವೇದಿಕೆ ಸಹ ಸಂಚಾಲಕರಾದ ನಾಗೇಶ ನಾಯ್ಕ ಹೊನ್ನೆಗದ್ದೆ, ಕುಮಾರ ನಾಯ್ಕ ಹನುಮಾನನಗರ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ, ಲೋಕೇಶ ದೇವಾಡಿಗ ಪೊಲೀಸರಿಗೆ ಸಹಕರಿಸಿದ್ದರು.
ಈ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ರೀಲ್ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : cattle protection/ ಜಾನುವಾರು ರಕ್ಷಣೆ; ೮ ಜನರ ವಿರುದ್ಧ ಪ್ರಕರಣ