ಭಟ್ಕಳ: ಬಕ್ರೀದ್ ಹಬ್ಬದ (Bakrid festival) ಹಿನ್ನೆಲೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ೧೧ ಜಾನುವಾರುಗಳನ್ನು ರಕ್ಷಿಸಿದ (Cattle protection) ಘಟನೆ ತಾಲೂಕಿನ ಜಾಲಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ (National Highway)-೬೬ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಮಕ್ಕಳ ಡೈರಿ ಫೇಸ್ಬುಕ್ ಪೇಜ್ ಗೆ ಭೇಟಿ ನೀಡಿ
ಸುಮಾರು ₹ ೧.೪೦ ಲಕ್ಷ ಮೌಲ್ಯದ ೧೪ ಜಾನುವಾರುಗಳನ್ನು ಇಚರ್ ಕಂಪನಿಯ ಇನ್ಸುಲೇಟರ್ ವಾಹನದಲ್ಲಿ ಹಿಂಸಾತ್ಮಕವಾಗಿ ಹಗ್ಗಗಳಿಂದ ಕಟ್ಟಿ, ನೀರು-ಮೇವು ನೀಡದೆ ಒಂದರ ಮೇಲೊಂದು ತುಂಬಿಕೊಂಡು ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿತ್ತು. ಗುರುವಾರ ಬೆಳಗಿನ ಜಾವ ೪.೫೦ರ ಸುಮಾರಿಗೆ ಜಾಲಿ ಕ್ರಾಸ್ ಬಳಿ ಪೊಲೀಸರು ವಾಹನ ತಡೆದು ನಿಲ್ಲಿಸಲು ಸೂಚಿಸಿದರೂ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ಡೊಂಗರಪಳ್ಳಿ ಸಮೀಪದ ಖುಲ್ಲಾ ಜಾಗದಲ್ಲಿ ವಾಹನ ಬಿಟ್ಟು ಆರೋಪಿತರು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
SSLC exam/ ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಹತ್ತನೇ ರ‍್ಯಾಂಕ್ ಗಳಿಸಿದ ಶಿರಾಲಿಯ ಶ್ರೀಶಾ ಶ್ರೀಧರ ಶೇಟ
ವಾಹನದಲ್ಲಿದ್ದ ಜಾನುವಾರುಗಳಲ್ಲಿ ಒಂದು ಕೋಣ, ಒಂದು ಎಮ್ಮೆ ಹಾಗೂ ಒಂದು ಎತ್ತು ಉಸಿರುಗಟ್ಟಿ ಮೃತಪಟ್ಟಿದ್ದು, ಉಳಿದ ೧೧ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ (Cattle protection). ನಗರ ಠಾಣೆ ಪಿಎಸೈ ತಿಮ್ಮಪ್ಪ ಎಸ್ ದೂರು ನೀಡಿದ್ದು, ಪಿಎಸೈ ನವೀನ್ ನಾಯ್ಕ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
car collision/ ಭಟ್ಕಳದಲ್ಲಿ ಎರಡು ಕಾರುಗಳು ಡಿಕ್ಕಿ ಹೊಡೆದು ನಾಲ್ವರಿಗೆ ಗಾಯ



