ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿತರು (Cattle transporters) ಅರಣ್ಯ ಇಲಾಖೆ (forest department) ಜೀಪ್ ಕಂಡ ತಕ್ಷಣ ಕಾರು ಬಿಟ್ಟು ಪರಾರಿಯಾದ ಘಟನೆ ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಬಳಿ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಆರೋಪಿತರು (Cattle transporters) ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿ ಸುಮಾರು ₹೧.೦೩ ಲಕ್ಷ ಮೌಲ್ಯದ ಜಾನುವಾರುಗಳನ್ನು ತುಂಬಿಕೊಂಡು ಸಾಗಿಸುತ್ತಿದ್ದರು ಎನ್ನಲಾಗಿದೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ, ನೀರು ಹಾಗೂ ಹುಲ್ಲು ನೀಡದೆ ಸಾಗಿಸಲಾಗುತ್ತಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Car hit/ ಕಾರಿಗೆ ಹಿಂಬದಿಯಿಂದ ೪೦೭ ವಾಹನ ಡಿಕ್ಕಿ

ಬೆಳಗಿನ ಜಾವ ಹಲ್ಯಾಣಿ ಪ್ರದೇಶದಲ್ಲಿ ಪೆಟ್ರೋಲಿಂಗ್ ನಡೆಸುತ್ತಿದ್ದ ಅರಣ್ಯ ಇಲಾಖೆ ವಾಹನವನ್ನು ಕಂಡ ಆರೋಪಿತರು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಅಧಿಕಾರಿಗಳು ವಾಹನವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆರೋಪಿತರ ವಿರುದ್ಧ ಗ್ರಾಮೀಣ ಠಾಣೆ ಪಿಎಸೈ ಮಲ್ಲಿಕಾರ್ಜುನಯ್ಯ ಕೊರಾಣಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Scooty rider injured/ ನಿಯಂತ್ರಣ ತಪ್ಪಿ ಬಿದ್ದ ಸ್ಕೂಟಿ ಸವಾರಗೆ ಗಾಯ