ಭಟ್ಕಳ (Bhatkal) : ರಾಜ್ಯದ ವಿಧಾನಸಭೆಯ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ (congress) ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ ಹಿನ್ನೆಲೆ ಭಟ್ಕಳದ ಸಂಶುದ್ದೀನ್ ಸರ್ಕಲ್ ನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ (celebration) ಮಾಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸಂಭ್ರಮಾಚರಣೆಯಲ್ಲಿ (celebration) ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಮಾತನಾಡಿ, ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ನಮ್ಮ ನಾಯಕರಾದ ಸಿದ್ದರಾಮಯ್ಯ (siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ (DK Shivakumar)ಮತ್ತು ಮಂಕಾಳ ವೈದ್ಯರ (Mankal Vaidya) ಸಾರಥ್ಯದಲ್ಲಿ ನಡೆದ ಈ ಚುನಾವಣೆಯಲ್ಲಿ ಆ ಭಾಗದ ಮತದಾರರು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ಮೂಲಕ ಗೆಲುವಿಗೆ ಕಾರಣರಾಗಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂರೂ ಅಭ್ಯರ್ಥಿಗಳು ತುಂಬಾ ಶ್ರಮಪಟ್ಟಿದ್ದಾರೆ. ಜನರು ತುಂಬಾ ನಿರೀಕ್ಷೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ್ದಾರೆ. ಈ ಮೂರೂ ಭಾಗಗಳಲ್ಲಿ ಕೂಡ ನಮ್ಮ ಸಚಿವ ಮಂಕಾಳ ವೈದ್ಯರ ನೇತೃತ್ವದಲ್ಲಿ ಪ್ರಚಾರಕ್ಕೆ ತೆರಳಿದ್ದೆವು ಎಂದರು.
ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ೧೨೦ ಮಕ್ಕಳಿಗೆ ಮಂಪ್ಸ್ ವೈರಸ್
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸುರೇಶ ನಾಯ್ಕ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ ನಾಯ್ಕ, ಸುಧಾಕರ ನಾಯ್ಕ,
ರಾಜೇಶ ನಾಯ್ಕ, ಮಂಜುನಾಥ ನಾಯ್ಕ, ಮಜೀದ್, ಮಂಜಪ್ಪ ನಾಯ್ಕ ಜಾಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಸೈಕಲ್ ಹಿಡಿದು ಹೋಗುತ್ತಿದ್ದ ವ್ಯಕ್ತಿಗೆ ಅಪಘಾತ