ಭಟ್ಕಳ : ಇಲ್ಲಿನ ಪ್ರತಿಷ್ಠಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದಿಯಾ ಜಿ ಚದುರಂಗ ಸ್ಪರ್ಧೆಯಲ್ಲಿ (Chess Competition) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಅಚೀವರ‍್ಸ್ ಚೆಸ್ ಸ್ಕೂಲ್ ಉತ್ತರಕನ್ನಡ ಹಾಗೂ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಭಟ್ಕಳ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಶಾಲಾವಲಯ ಚದುರಂಗ ಸ್ಪರ್ಧೆ( Chess Competition) ನಡೆದಿತ್ತು. ೧೪ ವರ್ಷದೊಳಗಿನ ವಿಭಾಗದಲ್ಲಿ ದಿಯಾ ಜಿ. ಪ್ರಥಮ ಸ್ಥಾನ ಪಡೆದಿದ್ದಾಳೆ. ಆಗಸ್ಟ್ ತಿಂಗಳಿನಲ್ಲಿ ಕುಂದಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ದಿಯಾ ಜಿ. ಆಯ್ಕೆಯಾಗಿದ್ದಾಳೆ.

ಇದನ್ನೂ ಓದಿ : ಪ್ರಾಥಮಿಕ ಶಾಲಾ ಶಿಕ್ಷಕಿ ನಿಧನ

ದಿಯಾ ಜಿ. ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಪಾಲಕರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.