ಬೆಂಗಳೂರು (Bengaluru): ಜೆಸಿಬಿ ಹರಿದ ಪರಿಣಾಮ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ (Child death) ದಾರುಣ ಘಟನೆ ಮಹದೇವಪುರ (Mahadevapura) ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಗೋಡಿ ಬಳಿಯ ಸಿಟಿ ಲೇಔಟ್‌ನಲ್ಲಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಥವನ್ ರೆಡ್ಡಿ (೨) ಮೃತಪಟ್ಟ ದುರ್ದೈವಿ. ಜೆಸಿಬಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ತಲೆಯ ಮೇಲಿಂದ ಜೆಸಿಬಿ ಹರಿದಿದೆ. ಕೂಡಲೇ ಮಗುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ (Child death) ತಿಳಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Accident/ ಅಪಘಾತದಲ್ಲಿ ತಂದೆ-ತಾಯಿ, ಮಗು ದುರ್ಮರಣ