ಕುಮಟಾ (Kumta) : ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕುಮಟಾ (Kumta) ತಾಲೂಕಿನ ಎತ್ತಿನಬೈಲಿನಲ್ಲಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಎಲೆಕ್ಟ್ರಿಶಿಯನ್ ಮಂಜುನಾಥ ಗಾಂವಕರ ಅವರ ಮಗಳು ನಿವೇದಿತಾ ಮೃತಪಟ್ಟ ದುರ್ದೈವಿ. ಭಾನುವಾರ ಮನೆಯ ಅಂಗಳದಲ್ಲಿ ಆಡವಾಡುತ್ತಿದ್ದಾಗ ಮನೆಯ ಮುಂದೆ ಹರಿಯುತ್ತಿದ್ದ ಹಳ್ಳಕ್ಕೆ ಮಗು ಬಿದ್ದಿದೆ. ಇದನ್ನು ನೋಡಿದ ಮನೆಯವರು ತಕ್ಷಣ ಮಗುವನ್ನು ಮೇಲಕ್ಕೆತ್ತಿ ಆಂಬುಲೆನ್ಸ್ ಮೂಲಕ ಕುಮಟಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ದುರಾದೃಷ್ಟವಶಾತ್ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಮಗು ಕೊನೆಯುಸಿರೆಳೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ : Dog bite / ಹುಚ್ಚು ನಾಯಿ ಕಡಿದು ಮೂರು ಮಕ್ಕಳಿಗೆ ಗಾಯ