ಭಟ್ಕಳ: ತಾಲೂಕಿನ ಶಿರಾಲಿಯ ಆಳ್ವೆಕೋಡಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಚಿಪ್ಪಿಕಲ್ಲು ತೆಗೆಯಲು ಹೋಗಿ ಜಲಸಮಾಧಿಯಾಗಿರುವವರ (Chippikallu tragedy) ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ಐದು ಲಕ್ಷ ರೂ ಪರಿಹಾರ ಘೋಷಿಸಿದೆ. ಇದರೊಂದಿಗೆ ಅಸ್ವಸ್ಥರಾದವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಧರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್ಬುಕ್ ಪೇಜ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ (DCM DK Sivakumar) ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ (X) ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ (Chippikallu tragedy) ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ ೫ ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ” ಎಂದು ತಿಳಿಸಿದ್ದಾರೆ.



