ಭಟ್ಕಳ(Bhatkal): ಭಾರತೀಯ ಜನತಾ ಪಕ್ಷ (BJP) ಭಟ್ಕಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನರೇಂದ್ರ ಮೋದಿ (Narendra Modi)ಯವರ ಹರ್ ಘರ್ ತಿರಂಗ (had ghar Tiranga) ಅಭಿಯಾನದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಮುರುಡೇಶ್ವರದಲ್ಲಿ (Murdeshwar) ಸ್ವಚ್ಛತೆ (cleaning) ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸ್ವಚ್ಛತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಕಳೆದ ಮೂರು ವರ್ಷದಿಂದ ಸ್ವಾತಂತ್ರ್ಯ ದಿನವನ್ನು ಬಹಳ ವಿಶೇಷವಾಗಿ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆ ಎನ್ನುವುದು ಕೇವಲ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗೆ ಸೀಮಿತವಾಗಿತ್ತು. ಆದರೆ ಈಗ ಪ್ರತಿ ಮನೆ ಮನೆಗಳಲ್ಲಿ ಸ್ವಾತಂತ್ರ್ಯ ದಿನವನ್ನು ಅತ್ಯಂತ ವಿಶೇಷವಾಗಿ ಆಚರಣೆ ಮಾಡುವ ದೃಷ್ಟಿಯಿಂದ ಹರ್ ಘರ್ ತಿರಂಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲದಿಂದ ವಿಶೇಷ ಕಾರ್ಯಕ್ರಮ ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಬೈಕ್ ರ‌್ಯಾಲಿ (bike rally) ಹಾಗೂ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.
ಇದನ್ನೂ ಓದಿ : ಧರ್ಮದ ತಕ್ಕಡಿ ಮೇಲೆದ್ದಾಗ ಜೀವನ ಪಾವನ: ರಾಘವೇಶ್ವರ ಶ್ರೀ
ಸ್ವಚ್ಛ ಭಾರತ (clean India) ಎನ್ನುವ ಯೋಜನೆ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ಭಾಗದಲ್ಲಿ ಸ್ವಚ್ಛತೆ ಮಾಡಬೇಕು. ನಾವು ವಾಸಿಸುತ್ತಿರುವ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳಬೇಕು ಎನ್ನುವ ದೃಷ್ಟಿಯಿಂದ ಖುದ್ದು ತಾವೇ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇಡೀ ದೇಶವನ್ನು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಿ ಓರ್ವ ಪ್ರಧಾನ ಮಂತ್ರಿ ಅಚ್ಚರಿ ಮೂಡಿಸಿರುವುದು ತಮಗೆಲ್ಲ ಗೊತ್ತಿರುವ ವಿಷಯವಾಗಿದೆ. ಅದೇ ರೀತಿ ಭಾರತೀಯ ಜನತಾ ಪಾರ್ಟಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಮುರುಡೇಶ್ವರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿದ್ದೇವೆ ಎಂದರು.
ಇದನ್ನೂ ಓದಿ : ಭಟ್ಕಳದಲ್ಲಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಿವಾನಿ ಶಾಂತರಾಮ ಭಟ್ಕಳ, ಭಟ್ಕಳ ಮಂಡಲ ಅಧ್ಯಕ್ಷ ಲಕ್ಷ್ಮಿನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಭಟ್ಕಳ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ : ರಂಜಿತಾ ನಾಯ್ಕ ಭಟ್ಕಳ ತಾಲೂಕಿಗೆ ಪ್ರಥಮ