ಭಟ್ಕಳ (Bhatkal) : ರವಿವಾರ ಬೆಳ್ಳಂಬೆಳಿಗ್ಗೆ ಮುರ್ಡೇಶ್ವರ (Murdeshwar) ಕಡಲತೀರದಲ್ಲಿನ ಅನಧಿಕೃತ ಗೂಡಂಗಡಿಗಳನ್ನ ಪೊಲೀಸ್ ಬಂದೋಬಸ್ತ್ ನಲ್ಲಿ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಸಹಾಯಕ ಅಯುಕ್ತೆ ಡಾ. ನಯನ ಹಾಗೂ ತಹಶೀಲ್ದಾರ ನಾಗೇಂದ್ರ ಶೆಟ್ಟಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸಿಆರ್ ಝಡ್ ಉಲ್ಲಂಘನೆ ಮೇಲೆ ಗೂಡಂಗಡಿ ತೆರವುಗೊಳಿಸಲಾಗುತ್ತಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಳೆದ ಕೆಲ ತಿಂಗಳಿಂದ  ಮುರ್ಡೇಶ್ವರ (Murdeshwar) ಕಡಲ ತೀರದ ಎದುರು ಸ್ಥಳೀಯರು ಗೂಡಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಸ್ಥಳೀಯರ ಮನವಿ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ (Mankal Vaidya) ಅವಕಾಶ ಮಾಡಿಕೊಟ್ಟಿದ್ದರು. ಆದರೀಗ ಅಧಿಕಾರಿಗಳು ಮತ್ತು ಪೊಲೀಸರು ತೆರವುಗೊಳಿಸುತ್ತಿದ್ದಾರೆ. ಇನ್ನು ಅಧಿಕಾರಿಗಳು ಟ್ರಾಫಿಕ್ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಪುಟ್ ಪಾತ್ ಮೇಲಿದ್ದ ಮೂರು ಅಂಗಡಿಗಳಿಗೆ ತೆಗೆಯುವಂತೆ ಹೇಳಿದಾಗ ಸ್ವಯಂ ಪ್ರೇರಿತವಾಗಿ ಅಂಗಡಿ ಮಾಲೀಕರೆ ಅಂಗಡಿಯನ್ನು ತೆರವುಗೊಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ : ಉಡುಪಿಯಲ್ಲಿ ಉತ್ತರ ಕನ್ನಡದ ಮೀನುಗಾರ ಸಾವು

ಡಿಸೆಂಬರ್ ಎರಡನೇ ವಾರದಲ್ಲಿ ಮುರ್ಡೇಶ್ವರಕ್ಕೆ (Murudeshwar) ಪ್ರವಾಸಕ್ಕೆ ಬಂದಿದ್ದ ಕೋಲಾರ ಮೂಲದ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು. ಇದಾದ ಬಳಿಕ ಕಡಲತೀರ ಪ್ರವಾಸಿಗರಿಗೆ ನಿರ್ಬಂಧಿಸಲಾಗಿತ್ತು. ನಂತರ ಅಧಿಕಾರಿಗಳ ಸಭೆ ನಡೆಸಿ ಕಡಲತೀರ ಸುರಕ್ಷತೆ ದೃಷ್ಟಿಯಿಂದ ಕೆಲವೊಂದು ಮಾರ್ಪಾಡುಗಳನ್ನ ಮಾಡಲು ಯೋಜಿಸಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಬೀಚ್ ಓಪನ್ ಮಾಡುತ್ತಿರುವ ಹಿನ್ನಲೆಯಲ್ಲಿ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ : ಪ್ರವಾಸೋದ್ಯಮಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ