ಭಟ್ಕಳ ಡೈರಿ ವರದಿ

ಭಟ್ಕಳ: ಸೆಪ್ಟೆಂಬರ್ ೨೪ರ ಬೆಳಿಗ್ಗೆ ೮ ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಹೆಚ್ಚಿನ ಸೆಖೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂದರೂ, ವ್ಯಾಪಕ ಮಳೆಯ ಸಾಧ್ಯತೆ ಕಡಿಮೆಯಾಗಿದೆ ಎಂದು ಮುನ್ಸೂಚನೆ ತಿಳಿಸಿದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ ೨೬ರವರೆಗೆ ಕರಾವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಮುಂದುವರಿಯುವ ಸಾಧ್ಯತೆ ಇದೆ.

ಸೆಪ್ಟೆಂಬರ್ ೨೬ರ ಬಳಿಕ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದ್ದರೂ, ಸೆಪ್ಟೆಂಬರ್ ೩೦ರಿಂದ ಮತ್ತೆ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ. ಮುಂದಿನ ದಿನಗಳಲ್ಲಿ ಹವಾಮಾನ ಪರಿಸ್ಥಿತಿಯಲ್ಲಿ ಬದಲಾವಣೆ ಸಾಧ್ಯತೆ ಇದೆ.

ಇದನ್ನೂ ಓದಿ:

ವೆಂಕಟಾಪುರ, ಕೋಲಾ ಪ್ಯಾರಡೇಸ್ ಬಳಿ ಜುಗಾರಾಟ: ಇಬ್ಬರ ವಿರುದ್ಧ ಪೊಲೀಸ್ ಕ್ರಮ

ಭಟ್ಕಳದಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ: ಶಿಕ್ಷಕರಿಗೆ ಗಾಯ

ಭಟ್ಕಳದ ಎಐಟಿಎಂನಲ್ಲಿ ಐಒಟಿ ಕ್ಲಬ್ ಉದ್ಘಾಟನೆ