ಭಟ್ಕಳ (bhatkal): ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ನೀರಗದ್ದೆ ಗುಡ್ಡದ ಮೇಲೆ ದುಷ್ಕರ್ಮಿಗಳು ಗೋಹತ್ಯೆ ಹತ್ಯೆ ಮಾಡಿ ತಲೆಯನ್ನು ಎಸೆದು ಹೋದ ಘಟನೆ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಮುಂಡಳ್ಳಿಯ ಸತ್ಯನಾರಾಯಣ ನಗರದ ಹೊನ್ನಪ್ಪ ಈರಯ್ಯ ನಾಯ್ಕರವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವನ್ನು ದುಷ್ಕರ್ಮಿಗಳು ಜೂನ್ ೨೯ರಂದು ಕಳ್ಳತನ ಮಾಡಿಕೊಂಡು ಹೋಗಿದ್ದರು. ಅದನ್ನು ಹಿಂಸಾತ್ಮಕವಾಗಿ ವಧೆ ಮಾಡಿ, ಅದರ ತಲೆಯನ್ನು ಕತ್ತರಿಸಿ ನೀರಗದ್ದೆಯ ಮಾರಕಲ್ಲ ಗದ್ದೆಯ ಖಾಲಿ ಜಮೀನಿನಲ್ಲಿ ಸೋಮವಾರ ಬೆಳಗ್ಗಿನ ಜಾವ ದುಷ್ಕರ್ಮಿಗಳು ಬಿಸಾಡಿ ಹೋಗಿದ್ದಾರೆ.
ಇದನ್ನು ಓದಿ: Arrest/ ರಾತ್ರಿ ಹೊತ್ತು ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು
ಈ ಬಗ್ಗೆ ಗ್ರಾಮೀಣ ಠಾಣೆಯ ಪಿ ಎಸ್ ಐ ರನ್ನಗೌಡ ಸ್ಥಳಕ್ಕೆ ತೆರಳಿ ಪರಿಶೀಲಿಸಿ ದೂರನ್ನು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ (complaint filed) ಭಟ್ಕಳ (Bhatkal) ಗ್ರಾಮೀಣ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಎ ಲಿಂಗಾರೆಡ್ಡಿ ಪ್ರತ್ಯೇಕ ಎರಡು ತಂಡಗಳನ್ನು ರಚಿಸಿದ್ದು, ಶೀಘ್ರ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ. ಘಟನೆ ಹಿನ್ನೆಲೆ ಹಿಂದೂ ಸಂಘಟನೆಗಳ ಪ್ರಮುಖರು ಠಾಣೆಗೆ ತೆರಳಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಇದನ್ನು ಓದಿ: Police raid/ ಕೋಳಿ ಅಂಕ ಆಡುತ್ತಿದ್ದ ಅರಣ್ಯ ಪ್ರದೇಶದಲ್ಲಿ ಪೊಲೀಸ್ ದಾಳಿ



