ಭಟ್ಕಳ: ಮುಸ್ಲಿಂ (Muslim) ಯುವಕನೊಬ್ಬ ಹಿಂದೂ (Hindu) ಯುವತಿಯನ್ನು ಭಟ್ಕಳ (Bhatkal) ಪಟ್ಟಣದಿಂದ ಸಾಗರ ರಸ್ತೆಯ ಕಡೆಗೆ (Sagar Road) ಕಾರಿನಲ್ಲಿ ಕರೆದೊಯ್ಯುತ್ತಿರುವುದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ (Hindu activists) ಮೇಲೆ ಪೊಲೀಸರು ಪ್ರಕರಣ (Complaint) ದಾಖಲಿಸಿಕೊಂಡಿದ್ದನ್ನು ಖಂಡಿಸಿ ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರು ಭಟ್ಕಳ ನಗರ ಠಾಣೆ ಮುಂದೆ ಬುಧವಾರ ರಾತ್ರಿ ಧರಣಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಘಟನೆ ನಡೆದ ತಕ್ಷಣ ಆರೋಪಿ ಮೇಲೆ ಪ್ರಕರಣ (Complaint) ದಾಖಲಿಸುವುದನ್ನು ಬಿಟ್ಟು ಹಿಂದೂ ಯುವತಿ ರಕ್ಷಣೆಗೆ ಹೋದವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲು ಯಾರ ಒತ್ತಡವಿದೆ. ಭಟ್ಕಳದಲ್ಲಿ ಇಂತಹ ಹಲವು ಪ್ರಕರಣ ನಡೆದಿದ್ದರೂ ಸರಿಯಾದ ಸಾಕ್ಷ್ಯ ಇಲ್ಲದೇ ಇಷ್ಟು ದಿನ ಸುಮ್ಮನಿದ್ದೆವು. ಆದರೆ ಬುಧವಾರ ಬೆಳಿಗ್ಗೆ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆ ಬಗ್ಗೆ ತಿಳಿದುಕೊಂಡಿದ್ದರೂ ಸಹ ಮುಸ್ಲಿಂ ಯುವಕನ ಮೇಲೆ ಕೇಸು ದಾಖಲಿಸುವುದನ್ನು ಬಿಟ್ಟು ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದೀರಿ ಎಂದು ಆಕ್ರೋಶ ಹೊರಹಾಕಿದರು.
Kannada language/ ಕನ್ನಡ ಭಾಷೆಯಲ್ಲಿ ಪ್ರತಿಶತ ನೂರು ಅಂಕ ಸಾಧಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
ಸ್ಥಳದಲ್ಲಿ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್, ಪಿಎಸ್ಐ ಇದ್ದರೂ ಯಾಕೆ ಆರೋಪಿ ಮೇಲೆ ಕ್ರಮ ಕೈಗೊಂಡಿಲ್ಲ. ಆರೋಪಿಯಿಂದ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು, ನಮ್ಮಿಂದ ಪ್ರಕರಣ ದಾಖಲಿಸಿಕೊಳ್ಳಲು ವಿಳಂಬ ಮಾಡಿರುವುದು ಯಾಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
Bhatkal man dies/ ದುಬೈನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಭಟ್ಕಳದ ಯುವಕ ಸಾವು
ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ದ ಆರೋಪಿಯನ್ನು ತಕ್ಷಣ ಬಂಧಿಸಬೇಕು. ಈತ ಈ ಹಿಂದೆ ಇಂತಹ ಕೃತ್ಯ ಕೃತಿ ಎಷ್ಟು ಎಸಗಿದ್ದಾನೆ ಎನ್ನುವುದನ್ನು ತನಿಖೆ ನಡೆಸಬೇಕು. ಹಿಂದೂ ಕಾರ್ಯಕರ್ತರ ಮೇಲಿನ ಕೇಸನ್ನು ವಾಪಾಸ್ ಪಡೆಯದೇ ಇದ್ದಲ್ಲಿ ಭಟ್ಕಳ ಚಲೋಗೆ ಕರೆ ನೀಡಬೇಕಾದೀತು ಎಂದು ಎಚ್ಚರಿಕೆ ನೀಡಿದರು.
Chippikallu Tragedy/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ನೆರವಾಗಲು ಬ್ರಹ್ಮಾನಂದ ಸರಸ್ವತಿ ಸ್ವಾಮಿ ಸೂಚನೆ
ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದನ್ನು ಉಪಸ್ಥಿತರಿದ್ದ ಮಾಜಿ ಸಚಿವ ಶಿವಾನಂದ ನಾಯ್ಕ (Shivanand Naik), ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಮುಖಂಡರಾದ ಈಶ್ವರ ಎನ್ ನಾಯ್ಕ, ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ, ಕೃಷ್ಣ ನಾಯ್ಕ ಆಸರಕೇರಿ, ಶ್ರೀನಿವಾಸ ನಾಯ್ಕ ಮುಂತಾದವರು ಖಂಡಿಸಿದರು.
Humanitarian/ ಮಕ್ಕಳಿಗೆ ಸಮವಸ್ತ್ರ ವಿತರಣೆ: ಜೈ ಸ್ಪೋರ್ಟ್ಸ್ ಕ್ಲಬ್ ಸಹಾಯ
ಡಿವೈಎಸ್ಪಿ (dySP) ಗಿರೀಶ ಅವರು ಗುರುವಾರ ಬೆಳಿಗ್ಗೆ ಪ್ರಕರಣ ಇತ್ಯರ್ಥಪಡಿಸಲಾಗುವುದು ಎಂದರು. ಜಿಲ್ಲಾ ಹೆಚ್ಚುವರಿ ಎಸ್ಪಿ (ASP) ಕೃಷ್ಣಮೂರ್ತಿ ಭಟ್ಕಳಕ್ಕೆ ಆಗಮಿಸಿ ಘಟನೆಯ ಮಾಹಿತಿ ಪಡೆದಿದ್ದಾರೆ. ಗುರುವಾರದೊಳಗೆ ಹಿಂದೂ ಕಾರ್ಯಕರ್ತರ ಮೇಲೆ ಹಾಕಿದ ಪ್ರಕರಣ ವಾಪಾಸ್ ಪಡೆಯದೇ ಇದ್ದಲ್ಲಿ ಭಟ್ಕಳ ಬಂದ್ಗೆ ಕರೆ ಕೊಡುವುದಾಗಿ ಬಿಜೆಪಿ ಮತ್ತು ಹಿಂದೂ ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
Humanitarian/ ಅಂಗವಿಕಲಗೆ ವೀಲ್ ಚೇರ್ ಕೊಡುಗೆ: ಭಟ್ಕಳದ ಆಟೋ ಚಾಲಕನ ನೆರವು
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಯಂತ ನಾಯ್ಕ, ನಾಯ್ಕ, ರಾಮಕೃಷ್ಣ ನಾಯ್ಕ, ಶ್ರೀನಿವಾಸ ನಾಯ್ಕ ಹನುಮಾನ ನಗರ ಸೇರಿದಂತೆ ಹಲವರಿದ್ದರು. ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಮತ್ತೆ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.
Murinakatte/ ಮುರಿನಕಟ್ಟೆ ವಿವಾದ ಶೀಘ್ರ ಪರಿಹಾರಕ್ಕೆ ಶಬರಿಮಲೈಯಲ್ಲಿ ಪ್ರಾರ್ಥನೆ



