ಭಟ್ಕಳ: ವಿದ್ಯಾರ್ಥಿಗಳು ನಾಡು ನುಡಿಯ ಅಭಿಮಾನ ಸದಾ ಉಳಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (BEO) ವೆಂಕಟೇಶ ನಾಯಕ ನುಡಿದರು. ಅವರು ಇಲ್ಲಿನ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲಾ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯೋಗದಲ್ಲಿ ೨೦೨೫ – ೨೬ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ (SSLC) ಕನ್ನಡ ಭಾಷೆಗೆ (Kannada language) ಪ್ರತಿಶತ ನೂರು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ ಎನ್ ವಾಸರೆ ಮಾತನಾಡಿ, ಪಠ್ಯ ಪುಸ್ತಕದ ಆಚೆಗೂ ಜ್ಞಾನ ವಿಸ್ತರಿಸ್ಕೊಂಡು ನಿಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಬೆಳೆಯಬೇಕು ಎಂದು ನುಡಿದರು. ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ ಡಿ ಬಿ ನಾಯ್ಕ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳನ್ನು ತಲುಪುವ ಅನೇಕ ಕಾರ್ಯಕ್ರಮವನ್ನು ನಿರಂತರವಾಗಿ ಸಂಘಟಿಸುತ್ತ ಬಂದಿದ್ದು, ವಿದ್ಯಾರ್ಥಿಗಳೊಂದಿಗೆ ಶಿಕ್ಷಕರನ್ನು ಅಭಿನಂದಿಸುತ್ತಿರುವುದು ಸಂತಸದ ಸಂಗತಿ ಎಂದರು.
Humanitarian/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ದಿನಸಿ ಸಾಮಗ್ರಿ ವಿತರಣೆ
ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ, ಕಳೆದ ಐದು ವರ್ಷಗಳಿಂದ ಕನ್ನಡ ಭಾಷಾ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ಅಭಿನಂದಿಸುತ್ತ ತಾಲೂಕಿನ ಎಲ್ಲ ಪ್ರೌಢ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ತಲುಪುವ ಕಾರ್ಯಕ್ರಮ ಪರಿಷತ್ತಿಗೆ ತುಂಬಾ ಸಂತೋಷವನ್ನು ಕೊಟ್ಟ ಕಾರ್ಯಕ್ರಮ ಎಂದರಲ್ಲದೆ ನಿರಂತರವಾಗಿ ಕನ್ನಡದ ಕಾರ್ಯಗಳನ್ನು ಮಾಡಲು ನೆರವಾದ ಎಲ್ಲರ ಸಹಕಾರವನ್ನು ಸ್ಮರಿಸಿದರು.
Case registered/ ಗೋವಿಂದ ನಾಯ್ಕ ವಿರುದ್ಧ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬೆಂಬಲ
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಮಾನಾಸುತ ಶಂಭು ಹೆಗಡೆ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ ಎನ್ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ಕೆರೆಕಟ್ಟೆ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರು ಸಾಂದರ್ಭಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ೩೬ ವರ್ಷಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ದಿ ನ್ಯೂ ಇಂಗ್ಲಿಷ್ ಶಾಲೆಯ ನಿವೃತ್ತ ಮುಖ್ಯಾಧ್ಯಾಪಕ ಆರ್ ಡಿ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ ಕೆರೆಕಟ್ಟೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ ಆರ್ ನಾಯ್ಕ, ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ನಾಯಕ ಉಪಸ್ಥಿತರಿದ್ದರು.
Appeal/ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಕಾರ್ಮಿಕ ನಿರೀಕ್ಷಕರಿಗೆ ಮನವಿ
೨೦೨೫- ೨೬ನೆಯ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ (Kannada language) ಪ್ರತಿಶತ ನೂರು ಅಂಕಗಳಿಸಿದ ೯೯ ವಿದ್ಯಾರ್ಥಿಗಳನ್ನು ಹಾಗೂ ಅವರ ಸಾಧನೆಗೆ ಬೆಂಬಲವಾಗಿ ನಿಂತ ೨೫ ಕನ್ನಡ ಭಾಷಾ ಶಿಕ್ಷಕರನ್ನು ಗೌರವಿಸಲಾಯಿತು. ಕಸಾಪ ಗೌರವಕೋಶಾಧ್ಯಕ್ಷ ಶ್ರೀಧರ ಶೇಟ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.
Case registered/ ಯುವತಿಯ ಕಾರಿನಲ್ಲಿ ಕರೆದೊಯ್ದ ಯುವಕನ ವಿರುದ್ಧ ಪ್ರಕರಣ ದಾಖಲು
ಕಸಾಪ ಕಾರ್ಯಕಾರಿ ಸಮಿತಿಯ ಪೆಟ್ರಿಕ್ ಟೆಲಿಸ್, ಪಾಂಡುರಂಗ ಅಳ್ವೆಗದ್ದೆ, ವಿದ್ಯಾಭಾರತಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿ ರೂಪ ಖಾರ್ವಿ, ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಕೆ ಬಿ ಮಡಿವಾಳ, ಶ್ರೀವಲಿ ಶಾಲೆಯ ಮುಖ್ಯಾಧ್ಯಾಪಕಿ ಮಮತಾ ಭಟ್ಕಳ, ಶಕುಂತಲಾ ಎನ್ ನಾಯಕ, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
Complaint/ ಹಿಂದು ಯುವತಿಯೊಂದಿಗೆ ಮುಸ್ಲಿಂ ಯುವಕ; ತಡೆದ ಹಿಂದೂ ಕಾರ್ಯಕರ್ತರ ಮೇಲೆ ದೂರು



