ಭಟ್ಕಳ: ಉತ್ತರ ಕನ್ನಡ (Uttara Kannada) ಜಿಲ್ಲಾ ಮತ್ತು ಭಟ್ಕಳ (Bhatkal) ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೨೦೨೫–೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC exam) ಕನ್ನಡ ಭಾಷೆಯಲ್ಲಿ (Kannada language) ಪ್ರತಿಶತ ೧೦೦ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ (Congratulatory ceremony) ಜೂನ್ ೧೮ರಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ಭಟ್ಕಳದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ನಡೆಯಲಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ (BEO) ವೆಂಕಟೇಶ ನಾಯಕ ಉದ್ಘಾಟಿಸಲಿದ್ದು, ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ಎನ್ ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ. ಆನಂದಾಶ್ರಮ ಪ್ರೌಢಶಾಲೆಯ ಪ್ರಾಂಶುಪಾಲೆ ಸಿಸ್ಟರ್ ವಿನುತ ಡಿಸೋಜ ಅಭಿನಂದನಾ ಪತ್ರ ಪ್ರಧಾನಿಸಲಿದ್ದಾರೆ.
Bhatkal man dies/ ದುಬೈನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಭಟ್ಕಳದ ಯುವಕ ಸಾವು
ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ ಆರ್ ನಾಯ್ಕ, ಸಹಕಾರಿ ಧುರೀಣ ಹಾಗೂ ಕಸಾಪ ಹಿರಿಯ ಆಜೀವ ಸದಸ್ಯ ಡಿ ಬಿ ನಾಯ್ಕ, ಸಾಹಿತಿ ಮಾನಾಸುತ ಶಂಭು ಹೆಗಡೆ, ಸಾಹಿತಿ ನಾರಾಯಣ ಯಾಜಿ ಶಿರಾಲಿ, ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಮೇಶ ಕೆರೆಕಟ್ಟೆ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ ಎನ್ ನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
Chippikallu Tragedy/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ನೆರವಾಗಲು ಬ್ರಹ್ಮಾನಂದ ಸರಸ್ವತಿ ಸ್ವಾಮಿ ಸೂಚನೆ
ಈ ಬಾರಿ ಕನ್ನಡ ಭಾಷೆಯಲ್ಲಿ (Kannada language) ಶೇಕಡಾ ೧೦೦ ಅಂಕಗಳನ್ನು ಗಳಿಸಿದ ೯೯ ವಿದ್ಯಾರ್ಥಿಗಳು ಹಾಗೂ ಅವರ ಸಾಧನೆಗೆ ಮಾರ್ಗದರ್ಶನ ನೀಡಿದ ಕನ್ನಡ ಭಾಷಾ ಶಿಕ್ಷಕರನ್ನು ಗೌರವಿಸಿ ಅಭಿನಂದಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಗಂಗಾಧರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Humanitarian/ ಮಕ್ಕಳಿಗೆ ಸಮವಸ್ತ್ರ ವಿತರಣೆ: ಜೈ ಸ್ಪೋರ್ಟ್ಸ್ ಕ್ಲಬ್ ಸಹಾಯ



