ಕಾರವಾರ (Karwar) :  ಜಿಲ್ಲೆಗೆ ಅಂತಾರಾಷ್ಟ್ರೀಯ ಪ್ರವಾಸಿಗರು ಆಗಮಿಸಲು ಅನುಕೂಲವಾಗುವಂತೆ ಮುರುಡೇಶ್ವರದಲ್ಲಿ (Murdeshwar) ೩೬೦ ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ‍್ಮಾಣ ಮಾಡಲಾಗುವುದು. ಇದರಿಂದ ಕ್ರೂಸ್‌ಗಳ ಮೂಲಕ ಪ್ರವಾಸಿಗರು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ಆಗಮಿಸಲು ಸಾಧ್ಯವಾಗಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ (Port Minister) ಮಂಕಾಳ ಎಸ್. ವೈದ್ಯ (Mankal Vaidya) ಹೇಳಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅವರು (Port Minister), ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶರಾವತಿ ನದಿ (Sharavati River) ತೀರದ ಹೊನ್ನಾವರದಲ್ಲಿ (Honnavar) ಬೋಟಿಂಗ್ (Boating) ಚಟುವಟಿಕೆಗಳ ಬಗ್ಗೆ ಸೇಫ್ಟಿ ಆಡಿಟ್ ನಡೆಸುವಂತೆ ಸಚಿವರು ತಿಳಿಸಿದರು. ಜಿಲ್ಲೆಯಲ್ಲಿ (Uttara Kannada) ಹೊಸ ಪ್ರವಾಸೋದ್ಯಮ (Tourism) ಚಟುವಟಿಕೆಗಳಿಗೆ ಅನುಮತಿ ನೀಡುವ ಮುನ್ನ ಕಡ್ಡಾಯವಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆ ಸಭೆಯಲ್ಲಿ ಪರಿಶೀಲಿಸಿ ಅನುಮತಿ ನೀಡುವಂತೆ ತಿಳಿಸಿದರು.

ಇದನ್ನೂ ಓದಿ :  ಅನುದಾನ ಬಿಡುಗಡೆಯಾದರೂ ಕಾಮಗಾರಿ ಇಲ್ಲ

ಜಿಲ್ಲೆಯಲ್ಲಿನ ಅನಧಿಕೃತ ಹೋಮ್ ಸ್ಟೇಗಳ (Home Stay) ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಪ್ರಸ್ತುತ ಸರ್ಕಾರದ ಕಾರ್ಯಸೂಚಿಯಂತೆ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಮ್ ಸ್ಟೇ ಗಳನ್ನು ಪರಿಶೀಲಿಸಿ ವರದಿ ನೀಡಬೇಕು.   ಅನಧಿಕೃತ ಎಂದು ಕಂಡು ಬರುವ ಹೋಮ್ ಸ್ಟೇ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ : ಕರಡಿ ದಾಳಿಯಿಂದ ವೃದ್ಧ ಗಂಭೀರ

ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಸಮುದ್ರದ ಅಪಾಯಗಳ ಬಗ್ಗೆ ತಿಳಿಸಿ, ಸುರಕ್ಷತಾ ಕ್ರಮಗಳ ಬಗ್ಗೆ ಬೀಚ್ ಜೀವ ರಕ್ಷಕರ ಮೂಲಕ ಜಾಗೃತಿ ಮುಡಿಸುವಂತೆ ಸಚಿವರು ತಿಳಿಸಿದರು. ಎಲ್ಲಾ ಬೀಚ್‌ಗಳಿಗೆ ಅಗತ್ಯವಿರುವಷ್ಟು ಸಂಖ್ಯೆಯ ಜೀವ ರಕ್ಷಕರನ್ನು ಹಾಗೂ ಮೇಲ್ವಿಚಾರಕರನ್ನು ನೇಮಕ ಮಾಡುವಂತೆ ಮತ್ತು ಪ್ರವಾಸೋದ್ಯಮ ಇಲಾಖೆಗೂ ಸಹ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ :  ಗೇರೆಣ್ಣೆ ತುಂಬಿದ ಟ್ಯಾಂಕರ್ ಪಲ್ಟಿ

ಬೀಚ್‌ನಲ್ಲಿ ನೇಮಕ ಮಾಡುವ ಪ್ರತಿ ಜೀವ ರಕ್ಷಕರಿಗೆ ಬೀಚ್‌ನಲ್ಲಿ ಕಾರ್ಯನಿರ್ವಹಿಸಬೇಕಾದ ನಿರ್ದಿಷ್ಟ ಸ್ಥಳವನ್ನು ಹಂಚಿಕೆ ಮಾಡಬೇಕು. ಆ ಪ್ರದೇಶದಲ್ಲಿ ಪ್ರವಾಸಿಗರಿಗೆ ಯಾವುದೇ ಅಪಾಯವಾಗದಂತೆ ನಿರಂತರವಾಗಿ ನಿಗಾ ವಹಿಸುವಂತೆ ಸೂಚನೆ ನೀಡಬೇಕು. ಅವರಿಗೆ ಸೂಕ್ತ ತರಬೇತಿ ಹಾಗೂ ಅಗತ್ಯವಿರುವ ಜೀವ ರಕ್ಷಣಾ ಸಾಮಗ್ರಿಗಳನ್ನು ಮತ್ತು ಸಮವಸ್ತ್ರವನ್ನು ಒದಗಿಸುವಂತೆ ಸಚಿವರು (Port Minister) ಸೂಚಿಸಿದರು. ಬೀಚ್‌ನಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದರು.

ಇದನ್ನೂ ಓದಿ : ಪ್ರೀತಿಸಿ ಮದುವೆಯಾಗಿ ಮನೆಬಿಟ್ಟು ಹೋದ ಮಗ ಹಾಸಿಗೆ ಹಿಡಿದ; ತಂದೆ ಆತ್ಮಹತ್ಯೆ

ಸಭೆಯಲ್ಲಿ ಕರ್ನಾಟಕ ರಾಜ್ಯ ಮಾರ್ಕೆಟಿಂಗ್‌ ಕಮ್ಯೂನಿಕೇಷನ್ ಅಂಡ್ ಅಡ್ರ‍್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಡಿ.ಎಫ್.ಓ. ರವಿಶಂಕರ, ಉಪ ವಿಭಾಗಾಧಿಕಾರಿ ಕನಿಷ್ಕ, ಕಾವ್ಯಾರಾಣಿ, ಡಾ.ನಯನಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಯಂತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :  ಇಬ್ಬರು ನಾಪತ್ತೆ; ಪ್ರತ್ಯೇಕ ಪ್ರಕರಣ ದಾಖಲು