ಭಟ್ಕಳ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬೆಂಗಳೂರಿನ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟವು ಗ್ರಾಹಕರ ಜಾಗೃತಿ ಕಾರ್ಯಕ್ರಮವನ್ನು (Consumer awareness program) ಜಂಟಿಯಾಗಿ ಆಯೋಜಿಸಿತ್ತು. ಬೆಂಗಳೂರಿನಲ್ಲಿರುವ (Bengaluru) ರಾಜಕೀಯೇತರ ಗ್ರಾಹಕ ಸಂಘಟನೆಯಾದ ಗ್ರಾಹಕ ಶಕ್ತಿಯ ಸಂಸ್ಥಾಪಕ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ್ ವಿ ಕೆ ಗಿಡಕ್ಕೆ ನೀರುಣಿಸುವ ಮೂಲಕ ಗ್ರಾಹಕರ ಜಾಗೃತಿ ಕಾರ್ಯಕ್ರಮ (Consumer awareness program) ಉದ್ಘಾಟಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಮಹತ್ವವನ್ನು ಒತ್ತಿ ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಎಸ್‌ಎನ್‌ಎಲ್ ಅಧಿಕಾರಿ ನಾಗರಾಜ, ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ನೀಡುವ ವಿವಿಧ ಸೇವೆಗಳು ಮತ್ತು ಸೌಲಭ್ಯಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಭಟ್ಕಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗೇಶ್ ಶೆಟ್ಟಿ, ಗ್ರಾಹಕರ ಹಕ್ಕುಗಳ ಜಾಗೃತಿ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

court building/ ಭಟ್ಕಳದಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅಡಿಗಲ್ಲು

ಐಕ್ಯೂಎಸಿ ಸಂಯೋಜಕ ಸುರೇಶ, ಸಹಾಯಕ ಪ್ರಾಧ್ಯಾಪಕ ಅಣ್ಣಪ್ಪ ನಾಯ್ಕ, ಮೋಹಿನಿ ಅತ್ತಿಮನಿ, ಫೆಡರೇಶನ್ ಸದಸ್ಯ ಮನೋಜ ಮುರ್ಡೇಶ್ವರ ಇತರರು ಉಪಸ್ಥಿತರಿದ್ದರು.  ವೈಶಾಲಿ ಜಿ ಆರ್ ಸ್ವಾಗತಿಸಿದರು. ಸಂಗೀತಾ ಚಿಮ್ಮಣಿ ಅತಿಥಿಗಳನ್ನು ಪರಿಚಯಿಸಿದರು. ಖುಷಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ, ಧನರಾಜ ಎನ್ ಎ ವಂದಿಸಿದರು.

kickboxing/ ಭಟ್ಕಳದ ನಾಗಶ್ರೀ ಮಾರ್ಷಲ್ ಆರ್ಟ್ಸ್ ನ ಕಿಕ್ ಬಾಕ್ಸಿಂಗ್ ಮಹಿಳಾ ಪಟುಗಳ ಸಾಧನೆ