ಭಟ್ಕಳ: ಪಟ್ಟಣದ ಮಣ್ಣಕುಳಿ ಪುಷ್ಪಾಂಜಲಿ ಥಿಯೇಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಶುಕ್ರವಾರದಿಂದ ನಿರಂತರ ವಿದ್ಯುತ್ ವ್ಯತ್ಯಯ (power outages) ಉಂಟಾಗುತ್ತಿದ್ದು, ಸ್ಥಳೀಯರು ಕತ್ತಲಲ್ಲೇ ದಿನ ಕಳೆಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದೆ ಮನೆಮಂದಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ರಾತ್ರಿ ವೇಳೆ ಪದೇಪದೇ ವಿದ್ಯುತ್ ಕಡಿತ (power outages) ಆಗುತ್ತಿರುವುದರಿಂದ ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ನಿವಾಸಿಗಳು ತಿಳಿಸಿದ್ದಾರೆ. ಸಮಸ್ಯೆ ಕುರಿತು ಸ್ಥಳೀಯರು ಹಲವಾರು ಬಾರಿ ಹೆಸ್ಕಾಂ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದರೂ ಕರೆ ಸ್ವೀಕರಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Doctor Mama/ ‘ಡಾಕ್ಟರ್ ಮಾಮ’ ಎಂದು ಇನ್ನು ಯಾರನ್ನು ಕರೆಯಲಿ?
“ಕಳೆದ ಶುಕ್ರವಾರದಿಂದ ಸರಿಯಾಗಿ ವಿದ್ಯುತ್ ಇಲ್ಲ. ದೂರು ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ರಾತ್ರಿ ವೇಳೆ ಸಂಪೂರ್ಣ ಕತ್ತಲೆ ಆವರಿಸುತ್ತಿದ್ದು ಭಯದ ವಾತಾವರಣ ನಿರ್ಮಾಣವಾಗಿದೆ,” ಎಂದು ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಸಮಸ್ಯೆ ಪರಿಹರಿಸಿ ಮಣ್ಣಕುಳಿ ಭಾಗಕ್ಕೆ ಸಮರ್ಪಕ ವಿದ್ಯುತ್ ಸರಬರಾಜು ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.



