ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್‌ಬಿ ಕಂಪನಿ ಸಹಿತ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲು ಅಂಕೋಲಾದ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ(Court Order) ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳದ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದಶಿ ರಾಘವೇಂದ್ರ ಕೊಂಡ್ರಹಳ್ಳಿ ತಿಳಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಶಿರೂರು ಗುಡ್ಡ ಕುಸಿದ ಘಟನೆಯಲ್ಲಿ ಐಆರ್‌ಬಿ ಕಂಪನಿಯ ವಿರುದ್ಧ ಶ್ರೀ ಪ್ರಣವಾನಂದ ಸ್ವಾಮೀಜಿ ನೀಡಿದ ಖಾಸಗಿ ದೂರಿನ ಮೇಲೆ, ನ್ಯಾಯಾಲಯ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ(Court Order). IRB ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾತಿಗೆ ನ್ಯಾಯಾಲಯದ ಆದೇಶ ಮಾಡಿದೆ. ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ನಿರ್ದೇಶಿಸಲಾಗಿದೆ.
ಇದನ್ನೂ ಓದಿ : ಹಿರಿಯ ಪತ್ರಕರ್ತ ಮೋಹನ ಹೆಗಡೆಗೆ ದತ್ತಿನಿಧಿ ಪ್ರಶಸ್ತಿ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಣವಾನಂದ ಶ್ರೀಗಳು ಖುದ್ದು ನ್ಯಾಯಾಲಯದಲ್ಲಿ ಹಾಜದಿದ್ದರು. ಮುಂದಿನ ದಿನಗಳಲ್ಲಿ ಕಳಪೆ ಕಾಮಗಾರಿಯ ಎಲ್ಲಾ ದಾಖಲಾತಿ ಪಡೆದು ಲೋಕಾಯುಕ್ತ, CBI, ED, ಸರ್ವೋಚ್ಚ ನ್ಯಾಯಾಲಯದಲ್ಲಿಯೂ ಸಹ ಮೊಕದ್ದಮೆ ದಾಖಲಿಸಿ ಕಾನೂನಾತ್ಮಕ ಹೋರಾಟ ನಡೆಸಿ ಮರಣ ಹೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ಶ್ರೀಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಕಾಲಕ್ಕೆ ಇರುವ ಶಕ್ತಿ ಅದ್ಭುತ: ರಾಘವೇಶ್ವರ ಶ್ರೀ