ಭಟ್ಕಳ (Bhatkal) : ಚಾಂಪಿಯನ್ಸ್ ಟ್ರೋಫಿಯ (Champions Trophy) ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ (Newzealand) ತಂಡವನ್ನು ಬಗ್ಗುಬಡಿದ ಭಾರತ ತಂಡ (Indian Team) ಚಾಂಪಿಯನ್ಸ್ ಟ್ರೋಫಿ ಗೆದ್ದು ಬೀಗಿದೆ ಬೆನ್ನಲ್ಲೆ ಭಟ್ಕಳ ಸಂಶುದ್ದೀನ್ ಸರ್ಕಲ್ ನಲ್ಲಿ ಕ್ರಿಕೆಟ್ ಅಭಿಮಾನಿಗಳು (Cricket fans) ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಒಂದು ಓವರ್ ಬಾಕಿ ಇರುವಾಗಲೇ ಸಂಶುದ್ದೀನ್ ಸರ್ಕಲ್‌ನಲ್ಲಿ ಕ್ರಿಕೆಟ್ ಅಭಿಮಾನಿಗಳು ಜಮಾವಣೆಗೊಳ್ಳಲು ಆರಂಭಿಸಿದರು. ಭಾರತ ಗೆಲುವು ಸಾಧಿಸುತ್ತಿದ್ದಂತೆ ಅಭಿಮಾನಿಗಳ (Cricket fans) ಸಂಭ್ರಮಾಚರಣೆ ಮುಗಿಲು ಮುಟ್ಟಿತು. ಟೀಂ ಇಂಡಿಯಾಗೆ (Team India) ಜೈಕಾರ ಹಾಕುತ್ತಾ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸುವ ಮೂಲಕ ತಮ್ಮ ಕ್ರೀಡಾಭಿಮಾನವನ್ನು ಮೆರೆದರು. ಈ ವೇಳೆ ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸಾರ್ವಜನಿಕರು ಕೂಡ ಭಾರತ ತಂಡ ಗೆಲುವನ್ನು ಅವರು ಕೂಡ ಸಂಭ್ರಮಿಸುವ ಮೂಲಕ ಆನಂದ ಪಟ್ಟರು. ಈ ವೇಳೆ ಪೊಲೀಸರು ವಾಹನಗಳ ಸಂಚಾರ ನಿರ್ವಹಣೆಗೆ ಹರಸಾಹಸ ಪಟ್ಟರು.
ಭಟ್ಕಳದಲ್ಲಿ ಸಂಭ್ರಮಾಚರಣೆಯ ವಿಡಿಯೋವನ್ನು ಯೂಟ್ಯೂಬ್ ಚಾನೆಲ್, ಇನ್ಸ್ಟಾಗ್ರಾಂನಲ್ಲಿ ಮತ್ತು ಫೇಸ್‌ಬುಕ್ ನಲ್ಲಿ ವೀಕ್ಷಿಸಬಹುದು.
ಇದನ್ನೂ ಓದಿ : cattle protection/ ಜಾನುವಾರು ರಕ್ಷಣೆ; ೮ ಜನರ ವಿರುದ್ಧ ಪ್ರಕರಣ