ಹುಬ್ಬಳ್ಳಿ (Hubballi) : ನಗರದ ದೇಶಪಾಂಡೆ ನಗರದಲ್ಲಿ ದತ್ತಾತ್ರೇಯ (dattatreya) ದೇವರ ವಿಗ್ರಹವನ್ನು ಭಗ್ನಗೊಳಿಸಲಾಗಿದ್ದು, ಸ್ಥಳದಲ್ಲಿ ಉದಿಗ್ನ ವಾತಾವರಣ ನಿರ್ಮಾಣವಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಇಲ್ಲಿನ ದೇಶಪಾಂಡೆ ನಗರದಲ್ಲಿನ  ಅಪರ್ಣಾ ಅಪಾರ್ಟೆಂಟ್ ಹತ್ತಿರದ ದತ್ತಾತ್ರೇಯ (dattatreya) ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಲಾಗಿದೆ.  ಸುಮಾರು ೨೦ ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ. ಕಳೆದ ಶನಿವಾರ ರಾತ್ರಿ ನವರಾತ್ರಿ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ದಾಂಡಿಯಾ ನೃತ್ಯ ಮುಗಿಸಿದ್ದಾರೆ. ಬೆಳಿಗ್ಗೆ ದೇವಸ್ಥಾನಕ್ಕೆ ಬಂದು ನೋಡಿದಾಗ ದೇವರ ಮೂರ್ತಿ ಭಗ್ನಗೊಂಡಿರುವುದು ಬೆಳಕಿಗೆ ಬಂದಿದೆ.

ವಿಡಿಯೋ ಸಹಿತ ಇದನ್ನೂ ಓದಿ : ಪ್ರವಾಸಕ್ಕೆ ಬಂದಿದ್ದ ಪಿಯು ವಿದ್ಯಾರ್ಥಿ ನೀರುಪಾಲು

ಸ್ಥಳದಲ್ಲಿ ಉದಿಗ್ನ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿದು ಭಕ್ತರು ಸ್ಥಳದಲ್ಲಿ ಜಮಾಯಿಸಿದ್ದಾರೆ. ದೇವರ ಮೂರ್ತಿ ವಿರೂಪಗೊಳಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.  ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳ ಪರಿಶೀಲನೆ ನಡೆಸಿರುವ ಪೊಲೀಸರು, ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ಮೂಲಕ ದುಷ್ಕರ್ಮಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಇದನ್ನೂ ಓದಿ : ಸಹ ಕೈದಿ ಮೇಲೆ ಮಾರಣಾಂತಿಕ ಹಲ್ಲೆ